ಮಂಗಳೂರು: ಕೊಲೆಗೆ ನಾವೇ ಪ್ರೇರಣೆ ಎಂದು ಹೇಳಿದವರು ಸಮಾಜಕ್ಕೆ ಅಪಾಯಕಾರಿ. ಇವರೇ ನಮ್ಮ ನಡುವಿನ ನಿಜವಾದ ದೇಶದ್ರೋಹಿಗಳು. ಇಂತವರು ಸಮಾಜಕ್ಕೆ ಭಾರ. ಹೀಗಾಗಿ ಇವರನ್ನು ಗಡಿಪಾರು ಮಾಡಬೇಕೆಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ (U.T Khader) ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ (Sharan Pumpwell) ದ್ವೇಷದ ಹೇಳಿಕೆ ನೀಡಿದ್ದಾರೆ. ಉಳ್ಳಾಲದಲ್ಲಿ ಜನ ಸೌಹಾರ್ದತೆಯಿಂದ ಇದ್ದಾರೆ. ಕೋಮುವಾದಿ ಶಕ್ತಿಗಳಿಗೆ ಜನ ಅವಕಾಶ ಕೊಡಲ್ಲ. ಹಿಂದೂ ಆಗಲೀ, ಮುಸ್ಲಿಂ ಆಗಲೀ ಯಾಕೆ ಕೊಲೆಯಾಗಬೇಕು ಕೊಲೆಯಾಗಬೇಕೆಂದು ಬಿಜೆಪಿ (BJP) ಯವರು ಕಾಯುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸರ್ಜಾಪುರ ಸುಲಿಗೆ ಪ್ರಕರಣದ ಮತ್ತೊಂದು ವೀಡಿಯೋ ಬಹಿರಂಗ – ಡಿಕ್ಕಿ ಹೊಡೆದು ಬಾನೆಟ್ ಏರಿದ ಕಿಡಿಗೇಡಿ
ಅಲ್ಲದೆ ಪ್ರಾಣ ಕಳಕೊಂಡವರ ಕುಟುಂಬದ ಅಕ್ಕ-ತಂಗಿಯರ ನೋವು ಇವರಿಗೆ ಅರ್ಥ ಆಗುತ್ತದೆಯೇ?. ಚುನಾವಣೆಗೋಸ್ಕರ, ಮಾಧ್ಯಮದಲ್ಲಿ ಬಿಲ್ಡಪ್ ಸಿಗತ್ತೆ ಅಂತ ಹೇಳಿಕೆ ಕೊಡುತ್ತಾರೆ. ಇವರ ಹೇಳಿಕೆಯಿಂದ ಜನರಲ್ಲಿ ಭಯ ಶುರುವಾಗಿದೆ. ಯಾಕೆ ಇಂಥವರನ್ನು ಸಮಾಜ ಹೊತ್ತುಕೊಳ್ಳಬೇಕು ಗಡಿಪಾರು ಮಾಡಿ ಎಂದು ಅವರು ಆಗ್ರಹಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k