– ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಬಸ್ ಸೌಲಭ್ಯ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಪ್ರಾರಂಭವಾಗಿದ್ದು, 15,881 ಪರೀಕ್ಷಾ ಕೇಂದ್ರಗಳಲ್ಲಿ 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ಮುಖ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ (U T Khader Fareed) ಹೇಳಿದರು.
ವಿಧಾನಸಭೆಯಲ್ಲಿಂದು ವಿದ್ಯಾರ್ಥಿಗಳಿಗೆ ಶುಭಕೋರಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮೊದಲನೇ ಹಂತ, ಅದು ಅಂತ್ಯವಲ್ಲ ಆರಂಭ. ರಾತ್ರಿ ಹಗಲೆನ್ನದೇ ಪರಿಶ್ರಮ ಪಟ್ಟು ಪರೀಕ್ಷೆಗೆ ಸಿದ್ಧರಾಗಿರುವ ಎಲ್ಲಾ ವಿದ್ಯಾರ್ಥಿಗಳು ಮನೋ ಸ್ಥೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದರು. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ ಜಡ್ಜ್ ಅಥವಾ ಸಿಬಿಐ ತನಿಖೆಗೆ ಕೊಡಬೇಕು: ವಿಜಯೇಂದ್ರ ಆಗ್ರಹ
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಫ್ರೀ ಬಸ್
ರಾಜ್ಯದಲ್ಲಿ 8,96,447 ವಿದ್ಯಾರ್ಥಿಗಳು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಇದನ್ನೂ ಓದಿ: ಹಾಟ್ ಅವತಾರ ತಾಳಿದ ಜಾಕ್ವೆಲಿನ್- ನಟಿಯ ಲುಕ್‌ಗೆ ಪಡ್ಡೆಹುಡುಗರು ಫಿದಾ
ಈ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೇ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದು ತೇರ್ಗಡೆ ಹೊಂದಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ: ವಿದ್ಯುತ್ ಸಬ್‌ಸ್ಟೇಷನ್‌ನಲ್ಲಿ ಅಗ್ನಿ ಅನಾಹುತ – ಲಂಡನ್ ಹೀಥ್ರೂ ವಿಮಾನ ನಿಲ್ದಾಣ ದಿನಪೂರ್ತಿ ಬಂದ್
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.