ತುಮಕೂರು: ರಾಜ್ಯದ ಮುಖ್ಯಮಂತ್ರಿಗೆ ಪ್ರಧಾನಮಂತ್ರಿ ಅವರು ತಮ್ಮ ಭೇಟಿಗೆ ಅವಕಾಶ ಮಾಡಿಕೊಟ್ಟಿಲ್ಲ. ಇದು ಕೇವಲ ಮುಖ್ಯಮಂತ್ರಿಗೆ ಆದ ಅವಮಾನ ಅಲ್ಲ. ಇಡೀ ರಾಜ್ಯದ ಜನತೆಗೆ ಮಾಡಿದಂತಹ ಅವಮಾನ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದಾರೆ.
ಪಾವಗಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯು.ಟಿ.ಖಾದರ್, ಇಂದು ಬಿಜೆಪಿ ಸರ್ಕಾರ ತನ್ನದೇ ಆದಂತಹ ರಾಜಕೀಯ ಜಂಜಾಟದಲ್ಲಿ ಇದೆ. ಇದರಿಂದ ಕರ್ನಾಟಕದ ಜನತೆಯನ್ನು ಸಂಪೂರ್ಣವಾಗಿ ಮರೆತಂತೆ ಕಾಣುತ್ತಿದೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸ್ಪಷ್ಟವಾದ ನಿರ್ಧಾರ ಕೈಗೊಂಡಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನಸಾಮಾನ್ಯರ ಮೇಲೆ ಮಾನವೀಯತೆ ಮತ್ತು ಕರುಣೆ ಇಲ್ಲವಾಗಿದೆ. ರಾಜಕೀಯ ಜಂಜಾಟ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಪೂರಕವಾದಂತಹ ಯಾವುದೇ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Advertisement
Advertisement
ರಾಜ್ಯದ ಅಭಿವೃದ್ಧಿಗಾಗಿ ನಾವು ಕಾಂಗ್ರೆಸ್ಸಿನರು ಮುಖ್ಯಮಂತ್ರಿಗಳ ಜೊತೆ ಇರುತ್ತೇವೆ. ಆದರೆ ಈ ಸರ್ಕಾರ ಜನತೆಯ ಅಭಿವೃದ್ಧಿಗಾಗಿ ಒಂದು ಕೆಲಸವನ್ನು ಮಾಡುತ್ತಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಖಾದರ್ ಹರಿಹಾಯ್ದರು.
Advertisement
ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನಸಾಮಾನ್ಯರ ಮೇಲೆ ಮಾನವೀಯತೆ ಮತ್ತು ಕರುಣೆ ಇಲ್ಲವಾಗಿದೆ. ರಾಜಕೀಯ ಜಂಜಾಟ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಪೂರಕವಾದಂತಹ ಯಾವುದೇ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದರು.
Advertisement
ರಾಜ್ಯದ ವಿದ್ಯಾರ್ಥಿಗಳಿಗೆ ಹೊಸ ಯೋಜನೆ ಕೊಟ್ಟಿಲ್ಲ, ಯುವ ಸಮುದಾಯಕ್ಕೆ ಬೇಕಾದಂತಹ ಉದ್ಯೋಗ ಸೃಷ್ಟಿ ಮಾಡಿಲ್ಲ. ಕೈಗಾರಿಕಾ ನೀತಿಯಲ್ಲಿ ಬದಲಾವಣೆ ಮಾಡಿಲ್ಲ. ರೈತರ ಸಾಲಮನ್ನಾ ಯೋಜನೆ ಸಂಬಂಧಪಟ್ಟಂತೆ ಸರ್ಕಾರ ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಬ್ಯಾಂಕುಗಳು ರೈತರಿಗೆ ಪದೇ ಪದೇ ನೋಟಿಸ್ ಕೊಡುತ್ತಿದೆ. ಈ ಬಗ್ಗೆ ಸರ್ಕಾರ ದಿವ್ಯ ಮೌನ ವಹಿಸಿದೆ. ಅಲ್ಲದೆ ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಬರಬೇಕಾಗಿತ್ತು. ನಮ್ಮ ಹಕ್ಕು ಅದನ್ನು ಕೇಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದರು.