ಅಬುಧಾಬಿ: ಅಚ್ಚರಿಯ ಬೆಳವಣಿಗೆಯಲ್ಲಿ ಪಾಕಿಸ್ತಾನದ (Pakistan) ಇಸ್ಲಾಮಾಬಾದ್ ವಿಮಾನ ನಿಲ್ದಾಣ (Islamabad International Airport) ನಿರ್ವಹಣೆ ಮಾತುಕತೆಯಿಂದ ಯುಎಇ (UAE) ಹಿಂದಕ್ಕೆ ಸರಿದಿದೆ.
ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆ ದಿಢೀರ್ ಒಂದೂವರೆ ಗಂಟೆ ಮಾತನಾಡಿದ ಕೆಲ ದಿನಗಳಲ್ಲಿ ಯುಎಇ ಈ ಮಹತ್ವದ ನಿರ್ಧಾರ ಪ್ರಕಟವಾಗಿದ್ದು ವಿಶೇಷ.
ಈಗಾಗಲೇ ಅಫ್ಘಾನಿಸ್ತಾನದಲ್ಲಿರುವ ಕಾಬೂಲ್ (Kabul) ಅಂತಾರಾಷ್ಟ್ರೀಯ ವಿಮಾನ ನಿಲ್ದಣವನ್ನು ಯುಎಇ ನಿರ್ವಹಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಯುಎಇ ಕಂಪನಿ ತೆಗೆದುಕೊಳ್ಳಬಹುದು ಎಂದು ವರದಿಯಾಗಿತ್ತು. ಇದನ್ನೂ ಓದಿ: ಜಸ್ಟ್ 2 ಗಂಟೆಗಳ ಭೇಟಿ – ಭಾರತಕ್ಕೆ ಯುಎಇ ಅಧ್ಯಕ್ಷರು ಬಂದಿದ್ದು ಯಾಕೆ?
ಯುಎಇ ಆರಂಭದಲ್ಲಿ ಆಸಕ್ತಿ ತೋರಿಸಿದ್ದರೂ ವಿಮಾನ ನಿಲ್ದಾಣದ ನಿರ್ವಹಣೆ ಮತ್ತು ಕಾರ್ಯಾಚರಣೆಗಳನ್ನು ಹೊರಗುತ್ತಿಗೆ ನೀಡಲು ಸ್ಥಳೀಯ ಪಾಲುದಾರರು ಸಿಗದ ಕಾರಣ ಹಿಂದಕ್ಕೆ ಸರಿದಿದೆ. ಈ ಬಗ್ಗೆ ಯುಎಇ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ ಎಂದು ಪಾಕ್ ಮಾಧ್ಯಮ ವರದಿ ಮಾಡಿದೆ. ಇದನ್ನೂ ಓದಿ: ಭಾರತದ ವ್ಯಾಪಾರ ಒಪ್ಪಂದಕ್ಕೆ ಶ್ವೇತಭವನದ ಜೊತೆ ಹೋರಾಟ- ಟ್ರಂಪ್, ವ್ಯಾನ್ಸ್‌ನಿಂದ ಸಾಧ್ಯವಾಗುತ್ತಿಲ್ಲ: ಸ್ಫೋಟಕ ಆಡಿಯೋ ಔಟ್
ಆಡಳಿತದಲ್ಲಿ ಮಿಲಿಟರಿ ಹಸ್ತಕ್ಷೇಪ ಹೆಚ್ಚಾಗಿರುವ ಕಾರಣ ಪಾಕಿಸ್ತಾನದ ಸರ್ಕಾರಿ ಸ್ವಾಮ್ಯದ ಉದ್ಯಮಗಳು ಭಾರೀ ನಷ್ಟಕ್ಕೆ ಕಾರಣವಾಗುತ್ತಿದೆ. ನಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡಲು ಪಾಕ್ ಮುಂದಾಗುತ್ತಿದೆ.


