ನವದೆಹಲಿ: ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆಯನ್ನು ಸಿದ್ಧಪಡಿಸಲು ರಚಿಸಲಾದ ಸಮಿತಿಯು ಫೆಬ್ರವರಿ 2 ರಂದು ರಾಜ್ಯ ಸರ್ಕಾರಕ್ಕೆ ತನ್ನ ಕರಡನ್ನು ಸಲ್ಲಿಸಲಿದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಯುಸಿಸಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಉತ್ತರಾಖಂಡದ (Uttarakhand) ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami ) ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ `ಏಕ್ ಭಾರತ್, ಶ್ರೇಷ್ಠ ಭಾರತ್’ ಯೋಜನೆಯ ಭಾಗವಾಗಿ ರಾಜ್ಯದಲ್ಲಿ ಯುಸಿಸಿಯನ್ನು ಜಾರಿಗೆ ತರಲು ನಮ್ಮ ಸರ್ಕಾರ ಯಾವಾಗಲೂ ಬದ್ಧವಾಗಿದೆ ಎಂದು ಪೋಸ್ಟ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇನ್ನೊಂದೇ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ - ಬಿಜೆಪಿ ಸಚಿವರ ಗ್ಯಾರಂಟಿ
Advertisement
Advertisement
ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಯುಸಿಸಿ ಸಮಿತಿಯ ಅವಧಿಯು ಜನವರಿ 26 ರಂದು ಕೊನೆಗೊಂಡಿದೆ. ಸಮಿತಿಯ ಅವಧಿಯನ್ನು ಈಗಾಗಲೇ ಮೂರು ಬಾರಿ ವಿಸ್ತರಿಸಲಾಗಿದೆ. ಫೆಬ್ರವರಿ 2 ರಂದು ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಹಸ್ತಾಂತರ ಮಾಡಲಿದೆ. ಇದನ್ನೂ ಓದಿ: Gyanvapi Mosque Case: ವಜುಖಾನಾ ಡಿ-ಸೀಲಿಂಗ್‌ಗೆ ಹಿಂದೂ ಪರ ಅರ್ಜಿದಾರರಿಂದ ಸುಪ್ರೀಂಕೋರ್ಟಿಗೆ ಅರ್ಜಿ