ಜೈಪುರ: ಟೈಲರ್ ಕನ್ಹಯ್ಯ ಲಾಲ್ ಅವರ ಭೀಕರ ಹತ್ಯೆಯ ಹಿನ್ನೆಲೆಯಲ್ಲಿ ಉದಯಪುರದ ಇನ್ಸ್‌ಪೆಕ್ಟರ್ ಜನರಲ್ ಮತ್ತು ಪೊಲೀಸ್ ಸೂಪರಿಂಟೆಂಡೆಂಟ್ ಸೇರಿದಂತೆ ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) 32 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಉಚ್ಚಾಟಿತ ನಾಯಕಿ ನೂಪುರ್ ಶರ್ಮಾರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಕನ್ಹಯ್ಯ ಲಾಲ್‌ಗೆ ಬೆದರಿಕೆ ಕರೆಗಳು ಬಂದಿದ್ದವು. ಈ ಕುರಿತು ದೂರು ನೀಡಿದರೂ ಭದ್ರತೆ ಒದಗಿಸಿಲ್ಲ ಉದಯಪುರ ಪೊಲೀಸರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಉದಯಪುರ ಕೊಲೆಗಡುಕರಿಂದ ಸರಣಿ ಸ್ಫೋಟಕ್ಕೆ ಸ್ಕೆಚ್!
Advertisement
Advertisement
ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದರು. ಈ ಘಟನೆಯಿಂದ ರಾಜಸ್ಥಾನದ ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ.
Advertisement
ಆರೋಪಿ ರಿಯಾಜ್, ಕನ್ನಯ್ಯಲಾಲ್ ಅವರ ಕತ್ತನ್ನು ಕತ್ತರಿಸಿದ್ದು, ಮತ್ತೊಬ್ಬ ಆರೋಪಿ ಈ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಈ ಕೊಲೆಯನ್ನು ತಾವೇ ಮಾಡಿದ್ದಾಗಿ ಹೇಳಿರುವ ವಿಡಿಯೊಯೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಇಬ್ಬರನ್ನೂ ಬಂಧಿಸಲಾಗಿದೆ. ಇದನ್ನೂ ಓದಿ: ಕನ್ಹಯ್ಯ ಲಾಲ್ ಕುಟುಂಬಕ್ಕೆ ನೆರವು – 24 ಗಂಟೆಯಲ್ಲಿ ಬಂತು 1 ಕೋಟಿ
Advertisement
ಹಂತಕರು ಪಾಕಿಸ್ತಾನ ಮೂಲದ ದಾವತ್-ಎ-ಇಸ್ಲಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು. ಒಬ್ಬ 2014 ರಲ್ಲಿ ಕರಾಚಿಗೆ ಹೋಗಿದ್ದರು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.