ದಾವಣಗೆರೆ: ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಮಾಡಿ ಇಸ್ಲಾಂ ಧರ್ಮಕ್ಕೆ ಕೆಟ್ಟ ಹೆಸರು ತಂದಿದ್ದಾರೆ. ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ನೀಡಬೇಕುಎಂದು ಉಮ್ಮತ್ ಚಿಂತಕರ ವೇದಿಕೆ ಒತ್ತಾಯಿಸಿದೆ.
ಉದಯಪುರದ ಹತ್ಯೆಯನ್ನು ಖಂಡಿಸಿದ ಉಮ್ಮತ್ ಚಿಂತಕರ ವೇದಿಕೆ, ದಾವಣಗೆರೆ ಅಪರ ಜಿಲ್ಲಾಧಿಕಾರಿ ಲೋಕೇಶ್ ಅವರಲ್ಲಿ ಮನವಿ ಮಾಡಿದೆ. ಇಸ್ಲಾಂ ಬಗ್ಗೆ ತಿಳಿಯದೇ ಇರುವ ವ್ಯಕ್ತಿಗಳಿಂದ ಈ ರೀತಿಯ ಕೃತ್ಯ ನಡೆಯುತ್ತಿದೆ. ಈ ಕೂಡಲೇ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ಕೊಡಿಸುವಂತೆ ಪ್ರಧಾನಿಯವರಲ್ಲಿ ಮನವಿ ಮಾಡಿದೆ. ಇದನ್ನೂ ಓದಿ: ತುಂಬಾ ಒಳ್ಳೇ ಕೆಲಸ ಮಾಡಿದ್ದೀಯಾ ಸಹೋದರ – ಕನ್ಹಯ್ಯ ಹತ್ಯೆ ಬೆಂಬಲಿಸಿದ ಮುಸ್ಲಿಂ ವ್ಯಕ್ತಿ ಅರೆಸ್ಟ್
ಪ್ರವಾದಿಗೆ ಅವಹೇಳನ ಮಾಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದಕ್ಕಾಗಿ ಉದಯಪುರದ ಹಿಂದೂ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಇಬ್ಬರು ಕೊಲೆಗಡುಕರು ಹತ್ಯೆ ನಡೆಸಿ, ಅದರ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಪ್ರಧಾನಿ ನರೇಂದ್ರ ಮೋದಿಯನ್ನೂ ಇದೇ ರೀತಿಯಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪಾತಕಿಗಳ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಇದನ್ನೂ ಓದಿ: ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ – ಮೂವರು ಕಾರ್ಯಕರ್ತರ ಪ್ಯಾಂಟ್‍ಗೆ ತಗುಲಿದ ಬೆಂಕಿ
ಇಬ್ಬರು ಧರ್ಮಾಂಧರು ಹಿಂದೂ ವ್ಯಕ್ತಿಯ ಶಿರಚ್ಛೇದನ ನಡೆಸಿ ಹತ್ಯೆ ಮಾಡಿದ್ದರಿಂದ ಮುಸ್ಲಿಂ ಸಮುದಾಯದ ಮೇಲೆ ಹಿಂದೂ ಸಂಘಟನೆಗಳು ಕಿಡಿ ಕಾರಿವೆ.