ಮೈಸೂರು: ಉದಯಗಿರಿ ಪೊಲೀಸ್ ಠಾಣೆ (Udayagiri Police Station) ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಕೆಸರೆರಚಾಟ ಮುಂದುವರಿದಿದೆ. ಈ ನಡುವೆ ಮಹತ್ವದ ಬೆಳವಣಿಗೆ ನಡೆದಿದ್ದು, ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆರೋಪಿ ಸತೀಶ್‌ಗೆ ಮೈಸೂರು ಕೋರ್ಟ್ (Mysuru Court) ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸರೋಜಾ ಅವರು ಆದೇಶ ಪ್ರಕಟಿಸಿದ್ದಾರೆ. ಆರೋಪಿ ಸತೀಶ್ ಪರ ವಕೀಲ ಹ.ಮಾ ಭಾಸ್ಕರ್ ವಾದ ಮಂಡಿಸಿದ್ದರು. ಇದನ್ನೂ ಓದಿ: ವಿದ್ಯಾರ್ಥಿಗಳ 13.4 ಲಕ್ಷ ಹೆಚ್ಚುವರಿ ಶುಲ್ಕ ವಾಪಸ್ ಕೊಡಿಸಿದ ಶುಲ್ಕ ನಿಯಂತ್ರಣ ಸಮಿತಿ
ಆರೋಪಿ ಸತೀಶ್ ಪರ ವಕೀಲ ಹಾ.ಮಾ.ಭಾಸ್ಕರ್ ವಾದ ಮಂಡಿಸಿದ್ದರು. ಬಂಧನ ಸಂಬಂಧ ಕೋರ್ಟ್‌ಗೆ ಪೊಲೀಸರು ಸರಿಯಾದ ಸಾಕ್ಷ್ಯಾದಾರ ಸಲ್ಲಿಸಿಲ್ಲ, ಯಾವ ಕಾರಣದಿಂದ ಒಂದು ಧರ್ಮದ ಭಾವನೆಗೆ ಧಕ್ಕೆ ಆಗುತ್ತೆ ಎಂಬುದನ್ನು ತಿಳಿಸಿಲ್ಲ. ಪೊಲೀಸರು ಈಗಾಗಲೇ ಆರೋಪಿಯ ವಿಚಾರಣೆ ಮುಗಿಸಿದ್ದಾರೆ. ಪೋಸ್ಟ್ ಹಾಕಲಾಗಿದೆ ಎನ್ನಲಾದ ಫೋನ್ ಕೂಡ ಸೀಜ್ ಮಾಡಿದ್ದಾರೆ. ಹಾಗಾಗಿ ಸತೀಶ್‌ಗೆ ಜಾಮೀನು ನೀಡುವಂತೆ ವಾದ ಮಂಡಿಸಿದ್ದರು. ವಾದ – ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ವಿಚಾರಣೆ ಮುಂದೂಡಿತ್ತು. ಇಂದು ಆದೇಶ ಪ್ರಕಟಿಸಿದೆ.
ಏನಿದು ಕೇಸ್?
ಇದೇ ಫೆಬ್ರವರಿ 10ರಂದು ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು. ದಾಳಿಯಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿತ್ತು. 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂ ಆಗಿದ್ದವು. ತನಿಖೆ ಆರಂಭಿಸಿದ್ದ ಪೊಲೀಸರು 1000ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.
ಅವಹೇಳನಕಾರಿ ಪೋಸ್ಟ್ ಹಾಕಿದ್ದ ಸತೀಶ್ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಈ ಬಗ್ಗೆ ಪೊಲೀಸ್ ಅಧಿಕೃತ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನು ಮೈಸೂರು ನಗರ ಪೊಲೀಸರು ಹಂಚಿಕೊಂಡಿದ್ದರು. ಇದನ್ನೂ ಓದಿ: ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಯಾರು ನುಂಗುತ್ತಿದ್ದಾರೆ? – ರಾಜ್ಯ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ:
ಪೊಲೀಸರ ಎಫ್‌ಐಆರ್ ಮಾಹಿತಿ ಪ್ರಕಾರ, ಆರಂಭದಲ್ಲಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧನ ಮಾಡಿ ಠಾಣೆಯಲ್ಲಿ ಪೊಲೀಸರು ಇರಿಸಿದ್ದರು. 9ನೇ ತಾರೀಕು ಕಲ್ಯಾಣಗಿರಿಯ ಪಾಂಡುರಂಗ ಅಲಿಯಾಸ್ ಸತೀಶ್‌ನನ್ನು ಠಾಣೆಗೆ ಕರೆತರಲಾಗಿತ್ತು. ರಾತ್ರಿ 8:30 ಗಂಟೆಗೆ ಠಾಣೆಯ ಬಳಿ ಮುಸ್ಲಿಂ ಯುವಕರು ಜಮಾಯಿಸಿದರು. ಆರೋಪಿಯನ್ನು ನಮ್ಮ ವಶಕ್ಕೆ ಕೊಡಿ, ನಮ್ಮ ಧರ್ಮದ ಬಗ್ಗೆ ಮಾತನಾಡಿದ್ದಾನೆ ಎಂದು ಯುವಕರ ಕೂಗಾಟ ಆರಂಭಿಸಿದ್ದಾರೆ. 9:15 ಗಂಟೆಗೆ ಏಕಾಏಕಿ 1,000 ಜನ ಮುಸ್ಲಿಂ ಯುವಕರ ಗುಂಪು ಜಮಾವಣೆ ಆಗಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕೂಗಾಟ ಮಾಡಿದರು.
ಪೊಲೀಸರು ಎಷ್ಟೇ ಹೇಳಿದರೂ ಕೇಳದ ಗುಂಪು ಏಕಾಏಕಿ ಪೊಲೀಸರ ಮೇಲೆ, ಠಾಣೆಯ ಮೇಲೆ ಕಲ್ಲು ತೂರಾಟ ಮಾಡಿದರು. ಕಲ್ಲು ತೂರಾಟಕ್ಕೆ ಪೊಲೀಸ್ ಠಾಣೆಯ ಗಾಜು, ಕಿಟಕಿ ಪುಡಿ ಪುಡಿ ಆಗಿದೆ. ಬಂದೋಬಸ್ತ್‌ನಲ್ಲಿದ್ದ ಪೊಲೀಸರ ಮೇಲೆಯೂ ಕಲ್ಲು ತೂರಾಟ ಮಾಡಿದರು. ರಸ್ತೆ ಮೇಲೆ ವಾಹನ ಓಡಾಟ ಮಾಡದಂತೆ ಬೆಂಕಿ ಹಚ್ಚಿ ಪುಂಡಾಟ ಮಾಡಿದರು. ಪೊಲೀಸರ ಮೇಲೆ ಮನಬಂದಂತೆ ಕಲ್ಲು ತೂರಾಟ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಹಲವರು ಪೊಲೀಸರಿಗೆ ಗಾಯವಾದವು. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫರ್ನಿಚರ್ ಅಂಗಡಿ, ಗೋಡೌನ್‌ಗೆ ಬೆಂಕಿ – 1.50 ಕೋಟಿ ರೂ. ಮೌಲ್ಯದ ವಸ್ತುಗಳು ಭಸ್ಮ
ಕಲ್ಲು ತೂರಾಟದಿಂದ ಸಾರ್ವಜನಿಕರಿಗೂ ಗಾಯವಾಗಿದೆ. ಡಿಸಿಪಿ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿದರು. ಬಳಿಕ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಸಿ ಬಲವಂತವಾಗಿ ಮುಸ್ಲಿಂ ಯುವಕರ ಗುಂಪು ಚದುರಿಸಲಾಯಿತು. ಅಧಿಕಾರಿಗಳ ಮೇಲೆ ಹಲ್ಲೆ ನಿಂದನೆ, ಸರ್ಕಾರಿ ಆಸ್ತಿ ವಾಹನಗಳ ಜಖಂ ಸೇರಿ ಆಸ್ತಿಪಾಸ್ತಿ ಹಾನಿಯಾಗಿದೆ. ಅಕ್ರಮ ಗುಂಪು ಕಟ್ಟಿ ಹಾನಿಯುಂಟು ಮಾಡಿದ ಮುಸ್ಲಿಂ ಯುವಕರ ಗುಂಪಿನ ಮೇಲೆ ಕ್ರಮಕ್ಕೆ ಎಂದು ಉದಯಗಿರಿ ಠಾಣೆಯ ಪಿಎಸ್‌ಐ ಸುನೀಲ್ ದೂರು ನೀಡಿದ್ದರು ಎಂದು ಉಲ್ಲೇಖಿಸಲಾಗಿದೆ.