ಉಡುಪಿ: ʻಉದಯವಾಣಿʼ ಸಂಸ್ಥಾಪಕ ಹಾಗೂ ಮಣಿಪಾಲದ ಪೈ ಕುಟುಂಬದ ಹಿರಿಯರಾದ ಮೋಹನ್ ದಾಸ್ ಪೈ (89) ಅವರು ನಿಧನರಾಗಿದ್ದಾರೆ.
ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅವರು ಇಂದು ಕೊನೆಯುಸಿರೆಳೆದರು. ಮಣಿಪಾಲದ ಪೈ ಕುಟುಂಬದ ಹಿರಿಯರಾದ ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದರು.
Advertisement
ಮೋಹನ್ ದಾಸ್ ಪೈ ಅವರು ಮಣಿಪಾಲದ ಶಿಲ್ಪಿ ಡಾ. ಟಿ.ಎಮ್.ಎ ಪೈ ಅವರ ಹಿರಿಯ ಪುತ್ರರು. ಡಾ. ಟಿಎಂಎ ಪೈ ಫೌಂಡೇಶನ್, ಎಂಜಿಎಂ ಕಾಲೇಜ್ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ಮೋಹನ್ ದಾಸ್ ಪೈ ಅವರ ಪಾರ್ಥಿವ ಶರೀರವನ್ನು ಎಂಜಿಎಂ ಕಾಲೇಜಿನಲ್ಲಿ ಸೋಮವಾರ ಅಂತಿಮ ದರ್ಶನಕ್ಕೆ ಇಡಲಾಗುವುದು. ಇದನ್ನೂ ಓದಿ: ದೊಡ್ಡಗೌಡರ ಮೇಲೆ ಯಾರದ್ದೋ ಕೆಟ್ಟ ಕಣ್ಣು ಬಿದ್ದಿದೆ – ಹೆಚ್‌ಡಿಕೆ, ರೇವಣ್ಣ ಕಣ್ಣೀರು
Advertisement
ಹಿರಿಯ ಉದ್ಯಮಿ, ಉದಯವಾಣಿ ದಿನಪತ್ರಿಕೆಯ ಸಂಸ್ಥಾಕರು ಆಗಿದ್ದ ಟಿ. ಮೋಹನದಾಸ್ ಪೈ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Advertisement
ಮೋಹನದಾಸ ಪೈ ಅವರು ನಿಧನ ಹೊಂದಿದ್ದಾರೆ ಎನ್ನುವ ವಿಷಯ ನನಗೆ ಆಘಾತ ಉಂಟು ಮಾಡಿದೆ. ಹಿರಿಯ ಚೇತನರು, ಎಲ್ಲರ ಮಾರ್ಗದರ್ಶಕರಂತಿದ್ದ ಟಿ. ಮೋಹನ್ ದಾಸ್ ಪೈ ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ದವರಿಗೆ ಪೈ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಕೋರಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿರ್ಬಂಧ ಇನ್ನೆರಡು ದಿನ ವಿಸ್ತರಣೆ