LatestMain PostNational

ಮಹಾರಾಷ್ಟ್ರ ನೂತನ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್‍ಗೆ ಉದ್ಧವ್ ಠಾಕ್ರೆ ವಿಶ್

Advertisements

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಮತ್ತು ಉಪ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವಿಸ್‍ಗೆ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಶುಭ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಉದ್ಧವ್ ಠಾಕ್ರೆ ಅವರು, ಹೊಸದಾಗಿ ನೇಮಕಗೊಂಡ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಶುಭಾಶಯಗಳು. ನೀವು ಮಹಾರಾಷ್ಟ್ರಕ್ಕೆ ಒಳ್ಳೆಯ ಕೆಲಸ ಮಾಡಬೇಕೆಂದು ನಾನು ಬಯಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಇಂದಿನಿಂದ 3 ದಿನ ರಾಹುಲ್ ಗಾಂಧಿ ಕೇರಳ ಪ್ರವಾಸ

ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಇಂದು ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಬಿಜೆಪಿಯ ಧೀಮಂತ ನಾಯಕ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯದಲ್ಲಿ ಹತ್ತು ದಿನಗಳ ಕಾಲ ನಡೆದ ರಾಜಕೀಯ ಹೈಡ್ರಾಮಾಗೆ ಕೊನೆಗೂ ಅಂತ್ಯ ಹಾಡಿದ್ದಾರೆ. ಇದನ್ನೂ ಓದಿ: ಇಂದು ಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ಹಬ್ಬದ ಸಂಭ್ರಮ

ಬುಧವಾರ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಪತನದ ನಂತರ ಮುಂದಿನ ಮುಖ್ಯಮಂತ್ರಿಯಾಗಿ ದೇವೆಂದ್ರ ಫಡ್ನವೀಸ್ ಸಿಎಂ ಕುರ್ಚಿ ಏರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಏಕನಾಥ್ ಶಿಂಧೆ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳುವ ಮೂಲಕ ಟ್ವಿಸ್ಟ್ ನೀಡಿ ಎಲ್ಲರಿಗೂ ಬಿಜೆಪಿ ಹೈಕಮಾಂಡ್ ಅಚ್ಚರಿ ಮೂಡಿಸಿತು.

Live Tv

Leave a Reply

Your email address will not be published.

Back to top button