ನವದೆಹಲಿ: ಶಿವಸೇನೆ (Shiv Sena) ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಸಿಎಂ ಏಕನಾಥ ಶಿಂಧೆ (Eknath Shinde) ಬಣಕ್ಕೆ ನೀಡಿದ ಕೇಂದ್ರ ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ಮಾಜಿ ಸಿಎಂ ಉದ್ದವ್ ಠಾಕ್ರೆ (Uddhav Thackeray) ಬಣ ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದೆ. ಈ ಬಗ್ಗೆ ಅರ್ಜಿ ಸಲ್ಲಿಸಿರುವ ವಕೀಲರು ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ.
ಉದ್ದವ್ ಠಾಕ್ರೆ ಪರ ವಕೀಲರು ಇಂದು ಸಿಜೆಐ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಅರ್ಜಿ ಪ್ರಸ್ತಾಪ ಮಾಡಿದರು. ಆಯೋಗದ ನಿರ್ಧಾರದ ಸರಿ ಇಲ್ಲ. ಈ ಬಗ್ಗೆ ತುರ್ತು ವಿಚಾರಣೆಯ ಅಗತ್ಯ ಇದೆ ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಈ ಬಗ್ಗೆ ಮಂಗಳವಾರ ವಿಚಾರಣೆ ನಡೆಸುವುದಾಗಿ ಹೇಳಿದೆ.
Advertisement
Advertisement
ಠಾಕ್ರೆ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆ ಹಿನ್ನಲೆಯಲ್ಲಿ ಇದಕ್ಕೂ ಮುನ್ನ ಕೇವಿಯೇಟ್ (Caveat) ಸಲ್ಲಿಸಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ವಕೀಲರು ತಮ್ಮ ವಾದವನ್ನು ಕೇಳದೇ ಪ್ರಕರಣದಲ್ಲಿ ಯಾವುದೇ ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡಿದೆ. ಇದನ್ನೂ ಓದಿ: ಶಿಂಧೆ ಬಣಕ್ಕೆ ಶಿವಸೇನೆ ಹೆಸರು – ಉದ್ಧವ್‌ಗೆ ಭಾರೀ ಹಿನ್ನಡೆ
Advertisement
ಈ ನಡುವೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ವಿರುದ್ಧ ಹೇಳಿಕೆ ಹಿನ್ನಲೆ ಸಂಸದ ಸಂಜಯ್ ರಾವತ್ ವಿರುದ್ಧ ನಾಸಿಕ್‌ನ ಪಂಚವಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Advertisement
ಶಿವಸೇನೆ ಹೆಸರು ಅದರ ‘ಬಿಲ್ಲು ಮತ್ತು ಬಾಣ’ ಚಿಹ್ನೆ ಖರೀದಿಸಲು 2000 ಕೋಟಿ ರೂಪಾಯಿ ಒಪ್ಪಂದ” ನಡೆದಿದೆ. ಮಹಾರಾಷ್ಟ್ರ ಮತ್ತು ಮರಾಠಿಗರಿಗೆ ಅಮಿತ್ ಶಾ ಅತಿದೊಡ್ಡ ಶತ್ರು ಎಂದು ರಾವುತ್ ಆರೋಪ ಮಾಡಿದ್ದರು.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k