ಚೆನ್ನೈ: ಚಾಮರಾಜನಗರ ಬೇಟೆಗಾರರ ಎನ್‌ಕೌಂಟರ್ (Chamarajanagara Encounter) ಪ್ರಕರಣ ಕುರಿತು ತಮಿಳುನಾಡು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಪ್ರಸ್ತಾಪಿಸಿದ್ದಾರೆ.
ಕರ್ನಾಟಕದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಮೂವರು ತಮಿಳರನ್ನು ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂದು ಉದಯನಿಧಿ ಆರೋಪಿಸಿದ್ದಾರೆ. ಈ ಸಂಬಂಧ ತಮಿಳುನಾಡು ಸರ್ಕಾರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವಿವರ ಮುಂದಿಟ್ಟು ಘಟನೆಯನ್ನು ಸದನದಲ್ಲಿ ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಹನೂರು ಎನ್‌ಕೌಂಟರ್ ಪ್ರಕರಣ ಸಿಐಡಿಗೆ ಹಸ್ತಾಂತರ
ಎನ್‌ಕೌಂಟರ್‌ಗೆ ಬಲಿಯಾದ ಮೂವರು ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿಗಳು ಚಿತ್ರಹಿಂಸೆಯನ್ನು ಬಹಿರಂಗಪಡಿಸಿವೆ. ಈ ವಿಷಯದಲ್ಲಿ ತಮಿಳುನಾಡು ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ವಿಪಕ್ಷ ನಾಯಕ ಪ್ರಶ್ನಿಸಿದ್ದಾರೆ.
ತಮಿಳುನಾಡು ಸರ್ಕಾರ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ಮತ್ತು ಅವರ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹನೂರು ಶೂಟೌಟ್ ಕೇಸ್ | ಹತ್ತಿರದಿಂದಲೇ ಗುಂಡು – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?
ಕರ್ನಾಟಕದಲ್ಲಿ ಮೂವರು ತಮಿಳರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ನಾವು ಇದನ್ನು ಈಗಾಗಲೇ ಸದನದ ಗಮನಕ್ಕೆ ತಂದಿದ್ದೇವೆ. ಮೂವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವಿವಿಧ ವಿವರಗಳು ಹೊರಬಂದಿವೆ. ಅವರನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಈ ಬಗ್ಗೆ ಸರ್ಕಾರ ಏನು ಕ್ರಮ ಕೈಗೊಂಡಿದೆ? ಕಳೆದ ವಾರ ಇಲ್ಲಿಗೆ ಬಂದಿದ್ದ ಕರ್ನಾಟಕದ ಮುಖ್ಯಮಂತ್ರಿಯನ್ನು ವೈಯಕ್ತಿಕವಾಗಿ ಭೇಟಿಯಾದಾಗ ಏನಾದರೂ ತಿಳಿಸಲಾಗಿದೆಯೇ ಎಂದು ಕೇಳಿದ್ದಾರೆ.
