– ಹೋರಾಟಕ್ಕೆ ಶಾಸಕ ಯಶ್‍ಪಾಲ್ ಸುವರ್ಣ ಸಾಥ್
ಉಡುಪಿ: ನಗರದ (Udupi) ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ (ABVP) ಇಂದು ಪ್ರತಿಭಟನೆ (Protest) ನಡೆಸಿದೆ.
Advertisement
Advertisement
ಪ್ರಕರಣದ ವಿಚಾರವಾಗಿ ಸೂಕ್ತ ತನಿಖೆ ನಡೆಯಬೇಕು. ಅಲ್ಲದೇ ಸಂತ್ರಸ್ತ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈ ವೇಳೆ ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಎಸ್‍ಪಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದಿದ್ದು. ಸ್ಥಳಕ್ಕೆ ಎಸ್‍ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಭೇಟಿ ನೀಡಿದ್ದಾರೆ. ಈ ವೇಳೆ ಶಾಸಕ ಯಶ್‍ಪಾಲ್ ಸುವರ್ಣ ಅವರನ್ನು ಪೊಲೀಸರು ತಳ್ಳಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಉಡುಪಿ ಹೆಸರಿನಲ್ಲಿ ಹರಿದಾಡುತ್ತಿರುವ ಎಲ್ಲಾ ವಿಡಿಯೋಗಳು ಸುಳ್ಳು: ಖುಷ್ಬು ಸುಂದರ್
Advertisement
Advertisement
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‍ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಮಾತನಾಡಿ, ವೀಡಿಯೋ ವಿವಾದಕ್ಕೆ ತಳುಕು ಹಾಕಿ ಬೇರೆ ವೀಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ. ಈ ಪ್ರಕರಣದ ವೀಡಿಯೋ ವೈರಲ್ ಆಗಿಲ್ಲ. ಮೊಬೈಲ್ ಸಂಪೂರ್ಣ ಪರಿಶೀಲನೆ ಮಾಡಲಾಗಿದ್ದು, ಯಾವ ವೀಡಿಯೋಗಳು ಸಹ ಪತ್ತೆಯಾಗಿಲ್ಲ. ಬೇರೆ ಮೊಬೈಲ್‍ಗಳಿದ್ದರೆ ಅವುಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುವುದು. ಅಲ್ಲದೇ ಡಿಲೀಟ್ ಮಾಡಿದ್ದರೆ ಅವುಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿ ತನಿಖೆ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಕ್ಕೆ ವಿದ್ಯಾರ್ಥಿ ಮುಖಂಡರು ಎಫ್‍ಐಆರ್ ದಾಖಲಾಗಲು ಇಷ್ಟು ವಿಳಂಬ ಏಕೆ? ಎಫ್‍ಐಆರ್ ದಾಖಲಾಗದೆ ಹೇಗೆ ಮೊಬೈಲ್ ಪರಿಶೀಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆರೋಪಿಗಳನ್ನು ಬಚಾವ್ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಏನಿದು ಪ್ರಕರಣ?
ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ರಹಸ್ಯವಾಗಿ ಮೊಬೈಲ್ ಇರಿಸಿ ಹಿಂದೂ ವಿದ್ಯಾರ್ಥಿನಿಯರನ್ನು ಅಶ್ಲೀಲವಾಗಿ ಚಿತ್ರೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅಲ್ಲದೇ ಕಾಲೇಜಿನ ವಿರುದ್ಧ ಸಾಕ್ಷ್ಯ ನಾಶದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ವಿದ್ಯಾರ್ಥಿನಿಯರು ವೀಡಿಯೋ ಚಿತ್ರೀಕರಿಸಿ ಯುವಕರೊಂದಿಗೆ ಹಂಚಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ರಾಜ್ಯದೆಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿವೆ. ಇದನ್ನೂ ಓದಿ: ಉಡುಪಿ ವಿಡಿಯೋ ಚಿತ್ರೀಕರಣ ಕೇಸ್ – ವಿದ್ಯಾರ್ಥಿನಿಯರು, ಕಾಲೇಜ್ ವಿರುದ್ಧ ಎಫ್‌ಐಆರ್ ದಾಖಲು
Web Stories