-ಲೋಕಲ್ ಕ್ಯಾಂಡಿಡೇಟ್ ಬೇಡಿಕೆಯಿಟ್ಟ ಬಿಜೆಪಿ ಕಾರ್ಯತರ್ಕರು
ಉಡುಪಿ: ಮುಂಬರುವ ಲೋಕಸಭಾ ಚುನಾವಣೆಗೆ ಸ್ಥಳೀಯ ಅಭ್ಯರ್ಥಿಯೇ ಸ್ಪರ್ಧೆ ಮಾಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಯಾವ ಕ್ಷೇತ್ರದಿಂದ ಸಿಗುತ್ತದೆ ಎನ್ನುವುದು ಭಾರೀ ಚರ್ಚೆಯಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶೋಭಾ ಕರಂದ್ಲಾಜೆ ಅವರ ಹೆಸರು ರಾಜ್ಯ ರಾಜಕಾರಣದಲ್ಲಿ ಓಡಾಡುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶೋಭಾ ಕರಂದ್ಲಾಜೆ ಅವರು ರಾಷ್ಟ್ರರಾಜಕಾರಣದಲ್ಲಿ ತೊಡಗಿಸಿಕೊಂಡಿರುವ ಪ್ರಭಾವಿ ರಾಜಕಾರಣಿ. 2019ರ ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಶುರುವಾಗಿದ್ದು, ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡಬಾರದು ಎಂಬ ಒಂದು ಕೂಗು ಜೋರಾಗಿಯೇ ಕೇಳಿಬರುತ್ತಿದೆ ಎನ್ನಲಾಗಿದೆ.
Advertisement
Advertisement
2019ರ ಲೋಕಸಭಾ ಚುನಾವಣೆಗೆ ಇನ್ನೂ ಆರು ತಿಂಗಳು ಬಾಕಿಯಿದೆ. ಆದರೆ ಚುನಾವಣೆಗೆ ಸಿದ್ಧತೆಗಳನ್ನು ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಮಾಡಿಕೊಳ್ಳುತ್ತಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನ್ನುವುದಲ್ಲಿ ಸಂದೇಹವೇ ಇಲ್ಲ. ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರದಲ್ಲಿ ಏಳು ಕಡೆ ಕಮಲ ಅರಳಿದೆ. 2014ರಲ್ಲಿ ಶೋಭಾ ಕರಂದ್ಲಾಜೆ ಅವರನ್ನು ಮತದಾರರು ಭಾರೀ ಬಹುಮತದಿಂದ ಗೆಲ್ಲಿಸಿದ್ದರು. ಆದರೆ ಈ ಬಾರಿ ಫೀಲ್ಡ್ ಶೋಭಾ ಕರಂದ್ಲಾಜೆಗೆ ಪೂರಕವಾಗಿಲ್ಲವಂತೆ. ತಳಮಟ್ಟದ ಕಾರ್ಯಕರ್ತರು ಈ ಬಾರಿ ಕರಂದ್ಲಾಜೆ ಅಭ್ಯರ್ಥಿ ಆಗುವುದು ಬೇಡ ಅಂತಿದ್ದಾರಂತೆ. ನಮಗೆ ಲೋಕಲ್ ಅಭ್ಯರ್ಥಿ ಬೇಕು. ನಮ್ಮ ಜೊತೆ ಇರುವವರು ಬೇಕು ಅನ್ನೋದನ್ನು ನಿರೀಕ್ಷಿಸುತ್ತಿದ್ದಾರೆ.
Advertisement
Advertisement
ಶೋಭಾ ಕರಂದ್ಲಾಜೆ ಅವರು ಸಂಸದೆಯಾಗಿ ನಾಲ್ಕೂವರೆ ವರ್ಷವಾಗಿದೆ. ಆದರೆ ಕರಂದ್ಲಾಜೆ ತಿಂಗಳಿಗೆ ಎರಡು ಬಾರಿಯೂ ಕ್ಷೇತ್ರಕ್ಕೆ ಆಗಮಿಸಿಲ್ಲ. ಜನರ ಸಮಸ್ಯೆ ಕೇಳಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹೇಳಿಕೊಳ್ಳುವ ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿಲ್ಲ ಎಂಬ ಆರೋಪ ಇದೆ. ವಿಧಾನಸಭೆ, ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಯಾವುದೇ ಕ್ಯಾಂಪೇನ್‍ಗಳನ್ನು ಹರಕೆ ತೀರಿಸಿದಂತೆ ಕರಂದ್ಲಾಜೆ ಮಾಡಿ ಹೋಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿರುವ ಐದು ಶಾಸಕರನ್ನು ತನ್ನ ವಿಶ್ವಾಸಕ್ಕೆ ತೆಗೆದುಕೊಳ್ಳವುದರಲ್ಲಿ ಸಂಸದರು ವಿಫಲವಾಗಿದ್ದಾರೆ. ಇಷ್ಟೆಲ್ಲದರ ನಡುವೆ ಸ್ವತಃ ಶೋಭಾ ಕರಂದ್ಲಾಜೆ ಅವರು ಸೆಂಟ್ರಲ್ ನಿಂದ ರಾಜ್ಯ ರಾಜಕಾರಣಕ್ಕೆ ಬರುವ ತಯಾರಿ ನಡೆಸಿದ್ದಾರೆ. ತಾನು ಸ್ಪರ್ಧೆ ಮಾಡದೇ ಇದ್ದರೆ ಮಾಜಿ ಶಾಸಕ ಜೀವರಾಜ್ ಅವರಿಗೆ ಟಿಕೆಟ್ ಕೊಡಿಸುವ ಭರವಸೆಯನ್ನೂ ಈ ಹಿಂದೆಯೇ ಕೊಟ್ಟಿದ್ದಾರೆ. ಇದನ್ನು ಸ್ವತಃ ಶೋಭಾ ಕರಂದ್ಲಾಜೆ ಅವರೇ ಒಪ್ಪಿಕೊಂಡಿದ್ದಾರೆ.
ಈ ನಡುವೆ ಚುನಾವಣೆಗೆ ನಾಲ್ಕು ತಿಂಗಳು ಇದೆ ಎನ್ನುವಾಗ ಸಂಸದರು ಮತ್ತೆ ಉಡುಪಿ ಚಿಕ್ಕಮಗಳೂರು ರೌಂಡಪ್ ಶುರುಮಾಡಿದ್ದಾರೆ. ಹೋರಾಟ, ಸಮಾರಂಭ- ಉದ್ಘಾಟನಾ ಕಾರ್ಯಕ್ರಮಗಳಿಗೆ ಗೆಸ್ಟ್ ಆಗುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಲೋಕಸಭಾ ಟಿಕೆಟ್ ಯಾರಿಗೆ ಕೊಡಬೇಕು ಎನ್ನವುದು ಹೈಕಮಾಂಡ್‍ಗೆ ಬಿಟ್ಟದ್ದು ಎಂದು ಜಿಲ್ಲೆಯ ಬಿಜೆಪಿ ನಾಯಕರು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv