ಉಡುಪಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯ ಹಲವು ಮಸೀದಿಗಳಲ್ಲಿ ಪ್ರತಿಭಟನೆ ನಡೆಯಿತು. ಮಧ್ಯಾಹ್ನದ ಸಾಮೂಹಿಕ ನಮಾಜಿನ ಬಳಿಕ ಮುಸ್ಲಿಮರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರದ ಕ್ರಮವನ್ನು ಖಂಡಿಸಿದರು.
ಮಸೂದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಉಡುಪಿ ಜಾಮಿಯಾ ಮಸೀದಿ, ದೊಡ್ಡಣಗುಡ್ಡೆ ಮಸೀದಿ, ನೇಜಾರು ಮತ್ತಿತರೆಡೆಗಳಲ್ಲಿ ನಮಾಜಿನ ಬಳಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಮಸೂದೆ ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ದೇಶದ ಜಾತ್ಯಾತೀತ ಹಂದರವನ್ನು ನಾಶ ಮಾಡುವ ಮಸೂದೆಯನ್ನು ಯಾವುದೇ ಮುಸ್ಲಿಮರೂ ಬೆಂಬಲಿಸುವುದಿಲ್ಲ ಎಂಬ ಧಿಕ್ಕಾರ ಕೇಳಿಬಂತು. ಇದನ್ನೂ ಓದಿ: ರಾಜ್ಯಸಭೆಯಲ್ಲಿಯೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ
Advertisement
ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಮಸೂದೆಗೆ ನಮ್ಮ ವಿರೋಧ ಇದೆ. ಇಂದು ಸಾಂಕೇತಿಕ ಪ್ರತಿಭಟನೆಯಷ್ಟೇ ಮಾಡುತ್ತಿದ್ದೇವೆ. ಈ ವಿವಾದಾತ್ಮಕ ಮಸೂದೆ ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ಮುಸ್ಲಿಮರು ಸರ್ಕಾರಕ್ಕೆ ನೀಡಿದರು. ಇದನ್ನೂ ಓದಿ: ನಾಗರಿಕತ್ವ ಮಸೂದೆಗೆ ರಾಷ್ಟ್ರಪತಿ ಸಹಿ, ದೇಶಾದ್ಯಂತ ಜಾರಿ