ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ (Vide0) ಚಿತ್ರೀಕರಣ ಘಟನೆಗೆ ಸಂಬಂಧಪಟ್ಟ ಹಾಗೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಕುಂದಾಪುರ (Kundapura) ಡಿವೈಎಸ್ಪಿ ಪ್ರಕರಣದ ತನಿಖೆ ಶುರು ಮಾಡಿದ್ದಾರೆ. ಕಾಲೇಜಿಗೆ ಭೇಟಿ ಕೊಟ್ಟು ಆಡಳಿತ ಮಂಡಳಿಯ ವಿಚಾರಣೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.
ಉಡುಪಿಯ (Udupi) ಕಾಲೇಜಿನ ವಿಡಿಯೋ ಪ್ರಕರಣ ತನಿಖೆ ಹಂತದಲ್ಲಿದೆ. ಮೂವರು ವಿದ್ಯಾರ್ಥಿನಿಯರಿಗೆ ಕೋರ್ಟ್‌ನಿಂದ ಜಾಮೀನು ನೀಡಲಾಗಿದೆ. ಹಿಂದಿನ ತನಿಖಾಧಿಕಾರಿಯನ್ನು ಬದಲು ಮಾಡಿರುವ ಎಸ್‌ಪಿ ಅಕ್ಷಯ್ ಮಚ್ಚೀಂದ್ರ ಹಾಕೆ ಹಿರಿಯ ಪೊಲೀಸ್ ಅಧಿಕಾರಿ ಬೆಳ್ಳಿಯಪ್ಪ ಅವರಿಗೆ ತನಿಖೆಯ ಜವಾಬ್ದಾರಿ ನೀಡಿದ್ದಾರೆ. ಕುಂದಾಪುರದಲ್ಲಿ ದಕ್ಷ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬೆಳ್ಳಿಯಪ್ಪ ಉಡುಪಿಯ ಕಾಲೇಜಿಗೆ ಬಂದು ತನಿಖೆಯನ್ನು (Investigation) ಆರಂಭಿಸಿದ್ದಾರೆ. ಇದನ್ನೂ ಓದಿ: ಆಗಸ್ಟ್‌ನಲ್ಲಿ ಬರುವ ಜುಲೈ ತಿಂಗಳ ಕರೆಂಟ್ ಬಿಲ್ ಫ್ರೀ: ಕೆಜೆ ಜಾರ್ಜ್
Advertisement
Advertisement
ಆಡಳಿತ ಮಂಡಳಿಯ ಸಿಬ್ಬಂದಿಗಳ ಜೊತೆ ಮಾತನಾಡಿದ ಅವರು, ಜುಲೈ 18ರಂದು ನಡೆದ ಎಲ್ಲಾ ಬೆಳವಣಿಗೆಗಳನ್ನು ಸ್ಥಳದಲ್ಲಿದ್ದವರಿಂದ ಪಡೆದುಕೊಂಡಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಪಟ್ಟ ಅಗತ್ಯ ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಮೇಲೂ ಪ್ರಕರಣ ದಾಖಲಾಗಿದ್ದು, ನಿರ್ದೇಶಕರನ್ನು ವಿಚಾರಣೆ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸನ್ನಿಹಿತ – ವರಿಷ್ಠರ ಭೇಟಿಗೆ ದೆಹಲಿಗೆ ಸಿಟಿ ರವಿ
Advertisement
Advertisement
ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪುನರ್ ವಿಮರ್ಶೆ ಮಾಡಿದ್ದಾರೆ. ವಿದ್ಯಾರ್ಥಿನಿಯರನ್ನು ಹೊರಗಿನಿಂದ ಬಂದು ಭೇಟಿ ಮಾಡುತ್ತಿದ್ದರು ಎನ್ನುವ ಆರೋಪದಡಿ ಸಿಸಿಟಿವಿ ದೃಶ್ಯಗಳಲ್ಲಿ ಸಾಕ್ಷಿಗಳ ಲಭ್ಯತೆಗಾಗಿ ಜಾಲಾಡಿದ್ದಾರೆ. ಈಗಾಗಲೇ ಆರೋಪಿ ಮೂವರು ವಿದ್ಯಾರ್ಥಿನಿಯರು ಮತ್ತು ಸಂತ್ರಸ್ತೆಯ ಹೇಳಿಕೆಗಳನ್ನು ಹಿಂದಿನ ತನಿಖಾಧಿಕಾರಿ ಮಂಜುನಾಥ ಗೌಡ ಪಡೆದಿದ್ದರು. ಇದೀಗ ಬೆಳ್ಳಿಯಪ್ಪ ಮತ್ತೊಂದು ಸುತ್ತಿನ ಮಾತುಕತೆ ಮಾಡಿ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿಗಾಗಿ ಕಾಯುತ್ತಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ವರ್ಗಾವಣೆ ದಂಧೆ, ಸಿಎಂ ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ: ಬೊಮ್ಮಾಯಿ
Web Stories