ಉಡುಪಿ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರ ಹರ್ಷ ಮೊಯ್ಲಿ ರಾಜಕಾರಣಕ್ಕೆ ಎಂಟ್ರಿ ಕೊಡೋದು ಪಕ್ಕಾ ಆಗಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸೋದು ನಿಶ್ಚಿತ ಎಂಬ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಚುನಾವಣೆಗಿನ್ನು ಎರಡು ತಿಂಗಳು ಬಾಕಿ ಇರುವಂತೆ ಕಣ ರಂಗೇರುತ್ತಿದೆ. ಉಡುಪಿ ಜಿಲ್ಲೆಯಲ್ಲೇ ಕಾಂಗ್ರೆಸ್‍ಗೆ ಕಗ್ಗಂಟಾಗಿರೋದು ಕಾರ್ಕಳ ವಿಧಾನಸಭಾ ಕ್ಷೇತ್ರ. ಮೂರು ಮಂದಿ ಪ್ರಬಲ ಆಕಾಂಕ್ಷಿಗಳು ಕಾಂಗ್ರೆಸ್‍ಗೆ ನುಂಗಲಾರದ- ಉಗುಳಲೂ ಸಾಧ್ಯವಾಗದೆ ಬಿಸಿ ತುಪ್ಪದಂತಾಗಿದ್ದಾರೆ. ಈ ನಡುವೆ ವೀರಪ್ಪ ಮೊಯ್ಲಿ ಪುತ್ರ, ಕ್ಷೇತ್ರದ ಓರ್ವ ಪ್ರಬಲ ಟಿಕೆಟ್ ಆಕಾಂಕ್ಷಿ ಹರ್ಷ ಮೊಯ್ಲಿ ಸಾರ್ವಜನಿಕವಾಗಿ ಉಡುಪಿಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.
Advertisement
Advertisement
ಉಡುಪಿ ಜಿಲ್ಲಾ ಕಾಂಗ್ರೆಸ್ ಆಯೋಜನೆಯ ಹಿಂದುಳಿದವರ ಸಮಾವೇಶಕ್ಕೆ ಹರ್ಷ ಮೊಯ್ಲಿ ರಾಜಕಾರಣಿಯ ಗೆಟಪ್‍ನಲ್ಲಿ ಬಂದಿಳಿದಿದ್ದಾರೆ. ಹರ್ಷ ಮೊಯ್ಲಿ ಆಗಮನ, ನಾಯಕರ ಜೊತೆ ಮಾತುಕತೆಗಳನ್ನು ನೋಡಿದ್ರೆ ಟಿಕೆಟ್ ಮೊಯ್ಲಿ ಪುತ್ರನಿಗೆ ಪಕ್ಕಾ ಆದಂತಿದೆ. ಮೊಯ್ಲಿ ಪುತ್ರನಿಗೆ ಕಾರ್ಕಳದಲ್ಲಿ ಟಿಕೆಟ್ ಕೊಟ್ಟರೆ ಪಕ್ಷದೊಳಗೆ ಭಿನ್ನಮತ ಆಗೋದ್ರಲ್ಲಿ ಸಂಶಯವೇ ಇಲ್ಲ.
Advertisement
ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ ಈ ಬಾರಿ ಕೈ ಪಕ್ಷದ ಪ್ರಬಲ ಆಕಾಂಕ್ಷಿ. ಕಳೆದ ಎರಡು ವರ್ಷದಿಂದ ಉದಯ ಕುಮಾರ್ ಶೆಟ್ಟಿ ಕ್ಷೇತ್ರದಲ್ಲಿ ಎಲ್ಲಾ ತರದ ಸಿದ್ಧತೆ ನಡೆಸಿದ್ದಾರೆ. 25 ವರ್ಷದಿಂದ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಮತದಾರರ ಬೆಂಬಲ ಇದೆ, ಮಲಗಿದ್ದ ಕಾಂಗ್ರೆಸ್ಸನ್ನು ಬಡಿದೆಬ್ಬಿಸಿದ್ದೇನೆ ಎಂದು ಹೇಳಿರುವ ಉದಯ ಕುಮಾರ್ ಶೆಟ್ಟಿ, ಕೊನೆಯ ಹಂತದಲ್ಲಿ ಟಿಕೆಟ್ ಕೈತಪ್ಪಿದರೆ ಅಸಮಾಧಾನಗೊಳ್ಳೋದು ಗ್ಯಾರೆಂಟಿಯಾಗಿದೆ.
Advertisement
ಕಾರ್ಕಳದಲ್ಲಿ ಎರಡು ಬಾರಿ ಗೆದ್ದು, ಎರಡು ಬಾರಿ ಸೋತ ನಾನು ಶುದ್ಧ ಹಸ್ತ. 45 ವರ್ಷದಿಂದ ಪಕ್ಷದ ಶಿಸ್ತಿನ ಸಿಪಾಯಿಯಂತೆ ದುಡಿದಿದ್ದೇನೆ. ನನಗೆ ಅವಕಾಶ ಕೊಟ್ಟರೆ ಮತ್ತೆ ಕಾರ್ಕಳದಲ್ಲಿ ತುಷ್ಠೀಕರಣದ ರಾಜಕಾರಣಕ್ಕೆ ಮುಕ್ತಿ ಕೊಡುತ್ತೇನೆ ಎಂದು ಮಾಜಿ ಶಾಸಕ ಗೋಪಾಲ ಭಂಡಾರಿ ಹೇಳುತ್ತಿದ್ದಾರೆ. ವೀರಪ್ಪ ಮೊಯ್ಲಿಯೇ ಮುಂದೆ ನಿಂತು ಈ ಬಾರಿ ಟಿಕೆಟ್ ನನ್ನ ಮಗನಿಗೆ ಅಂತ ಹೇಳಿದ್ರೆ ಮೊಯ್ಲಿ ಶಿಷ್ಯ ಭಂಡಾರಿ ಸೈಲೆಂಟಾಗ್ತಾರೆ.
ಕಾರ್ಕಳಕ್ಕೆ ಒಬ್ಬ ಕಾಂಗ್ರೆಸ್ ನ ಎಂಎಲ್ ಎ ಬೇಕು. ಈಗಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವಧಿಯಲ್ಲಿ ಏನೂ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕ ಇದ್ದರೆ ಅಲ್ಲಿ ಹೆಚ್ಚಿನ ಅಭಿವೃದ್ಧಿ ಆಗುತ್ತದೆ. ಕೆಪಿಸಿಸಿ, ಎಐಸಿಸಿ ಸೆಲೆಕ್ಟ್ ಮಾಡೋಡು. ನನಗೆ ಟಿಕೆಟ್ ಫೈನಲ್ ಆಗಿದೆ ಎಂಬೂದು ಸರಿಯಲ್ಲ. ಕಾರ್ಕಳದಲ್ಲಿ ಹಲವಾರು ನಾಯಕರಿದ್ದಾರೆ. ಎಲ್ಲರಿಗೂ ನನಗೆ ಟಿಕೆಟ್ ಸಿಕ್ಕರೆ ಕೆಲಸ ಮಾಡಬಹುದು ಎಂಬ ಆಕಾಂಕ್ಷೆಯಿದೆ. ಅದು ತಪ್ಪೂ ಅಲ್ಲ. ರಾಜಕೀಯದಲ್ಲಿ ಅಕಾಂಕ್ಷೆಗಳು ತಪ್ಪಲ್ಲ. ಕಾಂಗ್ರೆಸ್ ವಿನ್ ಆಗ್ಬೇಕು ಅನ್ನೋದು ಎಲ್ಲರ ಆಕಾಂಕ್ಷೆ. ಒಂದು ವೇಳೆ ಪಾರ್ಟಿ ಹೇಳಿದರೆ ನಾನು ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ ಹರ್ಷ ಮೊಯ್ಲಿ ಹೇಳಿದ್ದಾರೆ.