– ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ
ಉಡುಪಿ: ಕೆನಡಾ ದೇಶದಿಂದ ಬಂದು ಉಡುಪಿಯ ಹೂಡೆ ಗ್ರಾಮದಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 82 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಸಾವಿಗೆ ಕೊರೊನಾ ಕಾರಣವಲ್ಲವೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ಮೃತ ವ್ಯಕ್ತಿ ಮೂಲತಃ ಪಂಜಾಬ್ ರಾಜ್ಯದವರಾಗಿದ್ದು, ಕಳೆದ ನವೆಂಬರ್‍ನಿಂದ ಹೊಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದರು. ರಣವೀರ್ ಇವರ ಸಾವಿಗೆ ಕೊರೊನಾ ಕಾರಣವಲ್ಲವಾಗಿದ್ದು, ಈ ಬಗ್ಗೆ ಅನಗತ್ಯವಾಗಿ ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಸಾರ್ವಜನಿಕರು ಯಾವುದೇ ಅನಗತ್ಯ ವದಂತಿ ಗಳಿಗೆ ಕಿವಿಗೊಡದಂತೆ ತಿಳಿಸಿದ್ದಾರೆ.
Advertisement
Advertisement
ಮೃತ ವ್ಯಕ್ತಿ ಉಡುಪಿಯ ತೋನ್ಸೆ ಹೆಲ್ತ್ ಸೆಂಟರ್ ನಲ್ಲಿ ಮೃತಪಟ್ಟಿದ್ದು, ಕೆನಡಾದಿಂದ ಬಂದಿರುವ ರಣವೀರ್ ಸಿಂಗ್ ವಿದೇಶಿ ಪ್ರಜೆಯೆಂಬ ಕಾರಣಕ್ಕೆ ಆತಂಕ ಎದುರಾಗಿತ್ತು. ಈ ಬಗ್ಗೆ ಸಾರ್ವಜನಿಕರಲ್ಲಿ ಯಾವುದೇ ಆತಂಕ ಬೇಡ. ರಣವೀರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪ್ರತೀ ಚಳಿಗಾಲಕ್ಕೆ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದರು. ಮೃತದೇಹವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಮಾಡಿ ಸರಕಾರಕ್ಕೆ ವರದಿ ಕೊಡುತ್ತೇವೆ ಎಂದರು.
Advertisement
ಮೃತ ವ್ಯಕ್ತಿಯಲ್ಲಿ ಕೊರೊನಾ ಲಕ್ಷಣ ಇರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಬೇಡ. ಸುಳ್ಳು ಪ್ರಚಾರ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿಕೆ ನೀಡಿದ್ದಾರೆ.