Connect with us

ಉಡುಪಿ ಜನರಲ್ಲಿ ಕೈ ಮುಗಿದು ವಿನಂತಿಸಿಕೊಂಡ ಡಿಸಿ

ಉಡುಪಿ ಜನರಲ್ಲಿ ಕೈ ಮುಗಿದು ವಿನಂತಿಸಿಕೊಂಡ ಡಿಸಿ

ಉಡುಪಿ: ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಇತ್ತ ಜನ ಮಾತ್ರ ಕ್ಯಾರೇ ಎನ್ನದೆ ಲಾಕ್ ಡೌನ್ ಇದ್ದರೂ ಓಡಾಡುತ್ತಿದ್ದಾರೆ. ಅಲ್ಲದೆ ಮದುವೆ ಕಾರ್ಯಕ್ರಮಗಳು ಕೂಡ ನಡೆಯುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಜಿಲ್ಲೆಯ ಜನರ ಬಳಿ ಕೈಮುಗಿದು ಮನವಿ ಮಾಡಿಕೊಂಡಿದ್ದಾರೆ.

ಮದುವೆಗಳಿಂದಲೇ ಕೊರೊನಾ ಹೆಚ್ಚಳವಾಗಿದೆ. ಸಾಧ್ಯವಾದಷ್ಟು ಮದುವೆಗಳಿಂದ ಕೊಂಚ ದೂರ ಇರಿ. ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಆದಷ್ಟು ಸಂಭ್ರಮದ ಕಾರ್ಯಕ್ರಮಗಳಿಂದ ದೂರ ಇರಿ ಎಂದು ತಿಳಿಸಿದ್ದಾರೆ.

ಸೋಂಕಿತರನ್ನು ಭೇಟಿಯಾದ ಸಂದರ್ಭದಲ್ಲಿ ಮಾಹಿತಿ ಪಡೆದುಕೊಂಡಿದ್ದೇನೆ. ಮದುವೆಯಲ್ಲಿ ಭಾಗಿ ಆದವರಲ್ಲಿ ಸೋಂಕು ಹೆಚ್ಚಾಗಿ ವ್ಯಾಪಿಸಿದೆ. ಆದಷ್ಟು ಮದುವೆಗಳನ್ನು ಮುಂದೂಡಿದರೆ ಒಳಿತು. ಮದುವೆ ಕಾರ್ಯಕ್ರಮದಲ್ಲಿ ಯಾರೂ ಭಾಗವಹಿಸದಿರಿ ಎಂದು ಉಡುಪಿ ಜಿಲ್ಲೆಯ ಸಾರ್ವಜನಿಕರಿಗೆ ಡಿಸಿ ಕರೆ ಕೊಟ್ಟಿದ್ದಾರೆ.

ಮೆಹಂದಿ ಕಾರ್ಯಕ್ರಮ ಆಯೋಜಿಸಿದರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಮತ್ತೆ ಲಾಕ್ ಡೌನ್ ಮುಂದುವರಿಯಲು ಅವಕಾಶ ಕೊಡಬೇಡಿ ಎಂದು ಡಿಸಿ ಜನರಲ್ಲಿ ವಿಜ್ಞಾಪನೆ ಮಾಡಿಕೊಂಡರು.

Advertisement
Advertisement