ಉಡುಪಿ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳು ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದೆ. ಮಣಿಪಾಲ ಪೊಲೀಸರು ಮತ್ತು ಸಾವಿರಾರು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದು ಗೊಂದಲದ ವಾತಾವರಣ ನಿರ್ಮಾಣವಾಯಿತು.
ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿಗಾಗಿ, ಬೆಲೆ ಏರಿಕೆ ನಿಯಂತ್ರಣಕ್ಕಾಗಿ,ಅಡುಗೆ ಅನಿಲ,ಪೆಟ್ರೋಲ್, ಡೀಸಲ್ ಬೆಲೆ ಇಳಿಸಲು ಎಡಪಕ್ಷಗಳು ಮತ್ತು ಕಾರ್ಮಿಕ ಸಂಘಟನೆಗಳು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿತ್ತು. ಮಾರುತಿ 28ಕ್ಕೆ ಜಿಲ್ಲೆಯ ಏಳು ತಾಲೂಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು ಅಲ್ಲಲ್ಲಿ ವಾಹನ ಜಾಥಾ ರಸ್ತೆ ಜಾಥಾ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಅಸಮಾಧಾನವನ್ನು ಹೊರ ಹಾಕಿತ್ತು. ಇದನ್ನೂ ಓದಿ: ಟಿಪ್ಪು ಬಗ್ಗೆ ಶೃಂಗೇರಿ ಮಠಕ್ಕೆ ಹೋಗಿ ಕೇಳಲಿ ಕೊಲ್ಲೂರಿನಲ್ಲಿ ತಿಳಿದುಕೊಳ್ಳಲಿ: ಡಿಕೆಶಿ
ಸಿಮೆಂಟ್, ಕಬ್ಬಿಣ, ಪೆಯಿಂಟ್ ಬೆಲೆ ನಿಯಂತ್ರಣಕ್ಕಾಗಿ ಉಡುಪಿ ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ಸಂಪೂರ್ಣ ಬೆಂಬಲ ವ್ಯಕ್ತ ಪಡಿಸಿದೆ. ಗ್ರಾಮ ಪಂಚಾಯತ್, ಪುರಸಭೆಗಳ ಮೂಲಕ ಪ್ರಧಾನಿಗಳಿಗೆ ಮನವಿ ಸಲ್ಲಿಸಲಾಗಿದೆ. ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯಿಂದ ಹೊರಟ ಸಾವಿರಾರು ಜನ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಜತಾದ್ರಿ ಸಮೀಪದ ಆಚಾರ್ಯ ಸರ್ಕಲ್ ಬಳಿ ಪ್ರತಿಭಟನಾಕಾರರು ಆಕ್ರೋಶ ಮುಗಿಲು ಮುಟ್ಟಿತ್ತು.
ಎರಡು ದಿನ ಜಿಲ್ಲೆಯ 13 ಸಾವಿರಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರು ಕೆಲಸಕ್ಕೆ ಹಾಜರಾಗದೆ ಮುಷ್ಕರದಲ್ಲಿ ಭಾಗವಹಿಸಿದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮಣಿಪಾಲ ಪೊಲೀಸರು ಹರಸಾಹಸ ಪಟ್ಟರು. ಕೊನೆಗೆ ಅಪರ ಜಿಲ್ಲಾಧಿಕಾರಿ ವೀಣಾ ಸ್ಥಳಕ್ಕೆ ಆಗಮಿಸಿ ಮನವಿಯನ್ನು ಪಡೆದುಕೊಳ್ಳುವುದರ ಮೂಲಕ ಕಾರ್ಮಿಕ ಸಂಘಟನೆಗಳ ಕಡಿಮೆಯಾಯಿತು. ಉಡುಪಿ ಜಿಲ್ಲೆಯ ಸ್ಥಳೀಯ ಸಮಸ್ಯೆಗಳ ಬಗ್ಗೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದದ ಗಮನ ಸೆಳೆದರು.