ಉಡುಪಿ: ಸರ್ಕಾರದ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳನ್ನು ಡಿಬಾರ್ ಮಾಡುತ್ತೇವೆ ಎಂದು ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಖಡಕ್ ಎಚ್ಚರಿಕೆ ನೀಡಿದ್ದಾರೆ.
Advertisement
ಕಾಲೇಜಿನಲ್ಲಿ ಮೂವತ್ತು ವರ್ಷಗಳಿಂದ ಯಾವುದೇ ತಾರತಮ್ಯ ಮಾಡಿಲ್ಲ. ಆದರೆ ಸರ್ಕಾರದ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳನ್ನು ಡಿಬಾರ್ ಮಾಡುತ್ತೇವೆ. ನಮಗೂ ಪ್ರತಿರೋಧ ಒಡ್ಡಲು ಗೊತ್ತಿದೆ ಎಂದು ಆರು ಜನ ವಿದ್ಯಾರ್ಥಿಗಳು ಸಾವಿರಾರು ವಿದ್ಯಾರ್ಥಿನಿಯರ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದ್ದಾರೆ. ಇದನ್ನೂ ಓದಿ: ನಿಮಗೆ ಪ್ರವೇಶವಿಲ್ಲ – ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಗೇಟ್‍ನಲ್ಲೇ ತಡೆದ ಪ್ರಿನ್ಸಿಪಾಲ್
Advertisement
Advertisement
ಸರ್ಕಾರದ ಆದೇಶದಲ್ಲಿ ಯಾವುದೇ ರಾಜಿ ಇಲ್ಲ. ಆಡಳಿತ ಮಂಡಳಿಯ ಸದಸ್ಯನಾಗಿ ಈವರೆಗೆ ಚರ್ಚೆ ಮಾಡಿದ್ದೇನೆ. ಶೈಕ್ಷಣಿಕವಾಗಿ ಕೊರತೆಯಿದ್ದರೆ ನೀಗಿಸುತ್ತೇವೆ. ಮುಂದಿನ ದಿನದಲ್ಲಿ ಡಿಬಾರ್ ಮಾಡುವ ಕೆಲಸ ನೂರಕ್ಕೆ ನೂರು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ಕೈಬಿಡಲು ಒಪ್ಪದ ಪೋಷಕರು – ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು!