ಉಡುಪಿ: ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಿಜಬ್ ವಿವಾದ(Hijab Controversy) ತಾರಕಕ್ಕೇರಿದೆ. ನಿನ್ನೆ ಗೇಟಿನ ಹೊರಗೆ ನಿಲ್ಲಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಮೈದಾನದವರೆಗೆ ಆಡಳಿತ ಮಂಡಳಿ ಬಿಟ್ಟುಕೊಂಡಿದೆ.
ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರಿಗೆ ಹಿಜಬ್ ವಿದ್ಯಾರ್ಥಿನೀಯರು ಒತ್ತಾಯ ಮಾಡಿದ್ದಾರೆ. ಸರ್ಕಾರದ ಆದೇಶ ಏನು ಎಂಬುದನ್ನು ಕಾಲೇಜಿನ ಮಹಿಳಾ ಉಪನ್ಯಾಸಕರು ವಿದ್ಯಾರ್ಥಿನಿಯರಿಗೆ ಮನದಟ್ಟು ಮಾಡಲು ಯತ್ನಿಸಿದರು. ಇದನ್ನೂ ಓದಿ: ಹಿಜಬ್ ನೆಪವೊಡ್ಡಿ ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗ್ತಿದೆ: ಮುಫ್ತಿ
Advertisement
Advertisement
ಇವತ್ತು ವಿದ್ಯಾರ್ಥಿನಿಯರು ಪೋಷಕರನ್ನು ಕಾಲೇಜಿಗೆ ಕರೆದುಕೊಂಡು ಬಂದಿದ್ದಾರೆ. ಪೋಷಕರಿಗೆ ಕಾಲೇಜಿನ ಕಂಪೌಂಡ್ ಒಳಗೆ ಪ್ರವೇಶಾವಕಾಶವನ್ನು ಕೊಟ್ಟಿಲ್ಲ. ಪ್ರಾಂಶುಪಾಲರು ಕಾಲೇಜಿನ ಗೇಟಿಗೆ ಬೀಗ ಹಾಕಿ ಪೋಷಕರನ್ನು ಹೊರಗೆ ನಿಲ್ಲಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸುವುದು ಮೂಲಭೂತ ಹಕ್ಕು: ಸಿದ್ದರಾಮಯ್ಯ
Advertisement
ಪೋಷಕರು, ಉಪನ್ಯಾಸಕರು, ವಿದ್ಯಾರ್ಥಿಗಳ ವಾಗ್ವಾದಗಳು ನಡೆಯುತ್ತಿದ್ದಂತೆ, ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್ ಪೋಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ನಡೆಸಿದರೆ ಎಫ್‌ಐಆರ್ ದಾಖಲಿಸುವ ಎಚ್ಚರಿಕೆ ನೀಡಿದರು. ಹೊರಗಡೆ ಈ ಗಲಾಟೆಗಳು ನಡೆಯುತ್ತಿದ್ದರೆ ತರಗತಿಗಳಲ್ಲಿ ಎಂದಿನಂತೆ ಪಾಠ ನಡೆಯುತ್ತಿವೆ.