DistrictsKarnatakaLatestLeading NewsMain PostUdupi

ಧರ್ಮವೇ ಮುಖ್ಯ- ಹಾಲ್ ಟಿಕೆಟ್ ಪಡೆದರೂ ಪರೀಕ್ಷೆಗೆ ಬಾರದ ಉಡುಪಿಯ ಅಲ್ಮಾಸ್

ಉಡುಪಿ: ರಾಜ್ಯಾದ್ಯಂತ ಇಂದಿನಿಂದ ವಿಜ್ಞಾನ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ಉಡುಪಿಯ ಹಿಜಬ್ ಹೋರಾಟಗಾರ್ತಿ ಅಲ್ಮಾಸ್ ಹಾಲ್ ಟಿಕೆಟ್ ಪಡೆದರೂ ಪರೀಕ್ಷೆಗೆ ಗೈರಾಗಿದ್ದಾರೆ.

ಉಡುಪಿಯ ಮಹಿಳಾ ಪದವಿ ಪೂರ್ವ ಕಾಲೇಜಿನ ಅಲ್ಮಾಸ್ ಎ ಹೆಚ್, ಹಜ್ರಾ ಶಿಫಾ, ಅಲಿಯಾ ಅಸಾದಿ, ಅಲಿಯಾ ಬಾನು ಮತ್ತು ರೇಷಂ ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಪ್ರತಿಭಟಿಸಿದ್ದರು. ಆರು ಮಂದಿ ಹಿಜಬ್ ಹೋರಾಟಗಾರ್ತಿಯರ ಪೈಕಿ ಇಬ್ಬರು ಪ್ರಥಮ ಪಿಯುಸಿ ಹಾಗೂ ಇನ್ನುಳಿದ ನಾಲ್ವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ.

ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಹಿಜಬ್ ಹೋರಾಟಗಾರ್ತಿಯರ ಪೈಕಿ ಅಲ್ಮಾಸ್ ಶುಕ್ರವಾರ ಕಾಲೇಜಿಗೆ ಬಂದು ಹಾಲ್ ಟಿಕೆಟ್ ತೆಗೆದುಕೊಂಡು ಹೋಗಿದ್ದರು. ಆದರೆ ಇಂದು ನಡೆದ ಪರೀಕ್ಷೆಗೆ ಗೈರಾಗಿದ್ದಾರೆ. ಇನ್ನೂಳಿದಂತೆ ಹಿಜಬ್ ಪರ ವಿದ್ಯಾರ್ಥಿನಿಯರಾದ ಹಜ್ರಾ, ಆಯೆಶಾ ಹಾಲ್ ಟಿಕೆಟ್‍ನ್ನು ತೆಗೆದುಕೊಳ್ಳಲು ಬಂದಿರಲಿಲ್ಲ. ಇದನ್ನೂ ಓದಿ:  ಮುಸ್ಲಿಮ್‌ ಬಾಹುಳ್ಯ ಜಾಗದಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ – ದಾರಿ ಬದಲಾವಣೆ ಮಾಡುವಂತೆ ಮನವಿ

ಶುಕ್ರವಾರ ನಡೆದಿದ್ದೇನು?: ಶುಕ್ರವಾರ ಕಾಮರ್ಸ್ ವಿಭಾಗದವರಿಗೆ ಪರೀಕ್ಷೆ ನಡೆದಿತ್ತು. ಆಲಿಯಾ ಅಸಾದಿ ಮತ್ತು ರೇಷಂ ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರದಲ್ಲಿ ಹೈಡ್ರಾಮಾವನ್ನು ಮಾಡಿದ್ದರು. ಇದನ್ನೂ ಓದಿ: ನಮ್ಮ ದೇಶ ಎತ್ತ ಸಾಗುತ್ತಿದೆ? ಇಲ್ಲಿ ಯಾವ ಅಪರಾಧ ನಡೆದಿದೆ – ಹಿಜಬ್‌ ಹೋರಾಟಗಾರ್ತಿ ಆಲಿಯಾ ಪ್ರಶ್ನೆ

ಹಿಜಬ್ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದರು. ಹೈಡ್ರಾಮಾದದ ವಿಚಾರ ತಿಳಿದು ಉಡುಪಿಯ ತಹಶೀಲ್ದಾರ್ ಅರ್ಚನಾ ಭಟ್ ಪರೀಕ್ಷಾ ಕೇಂದ್ರಕ್ಕೆ ಬಂದು ವಿದ್ಯಾರ್ಥಿನಿಯರ ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಹಿಜಬ್ ಮುಖ್ಯ ಎಂಬ ಹಠಕ್ಕೆ ಬಿದ್ದ ವಿದ್ಯಾರ್ಥಿನಿಯರು ಕೊನೆಗೆ ಪರೀಕ್ಷಾ ಕೇಂದ್ರದಿಂದ ಮನೆ ಕಡೆ ತೆರಳಿದ್ದರು.

Leave a Reply

Your email address will not be published.

Back to top button