ಉಡುಪಿ: ಜಿಲ್ಲೆಯ (Udupi) ಕಾಪುವಿನಲ್ಲಿ ನಡೆದ ಹಿಟ್ & ರನ್ ಕೇಸ್‍ನಲ್ಲಿ (Hit and Run Case) ಜೀಪ್ ಚಾಲಕನನ್ನು ಪೊಲೀಸರು (Police) ಬಂಧಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿ ಕಾರು ಚಲಾಯಿಸುತ್ತಿದ್ದ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಪೊಲೀಸರು ಹಿಟ್ & ರನ್ ಕೇಸ್ ದಾಖಲು ಮಾಡಿದ್ದರು. ಈ ಸಂಬಂಧ ಆರೋಪಿಯನ್ನ ಶಿರ್ವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Advertisement
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ಮೊಹಮ್ಮದ್ ಹುಸೇನ್ ತಂದೆ ಉಮ್ಮರಬ್ಬ ಪ್ರತಿಕ್ರಿಯಿಸಿ, ನನ್ನ ಮಗ ಮುಂಜಾನೆ ಕೆಲಸಕ್ಕೆ ಹೋಗುವಾಗ ಈ ಘಟನೆ ನಡೆದಿದೆ. ಒಂದು ಗಂಟೆ ರಕ್ತದ ಮಡುವಿನಲ್ಲಿಯೇ ಒದ್ದಾಡುತ್ತಿದ್ದ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೆ ನನ್ನ ಮಗ ಬದುಕುಳಿಯುತ್ತಿದ್ದ. ಪೊಲೀಸ್ ಇಲಾಖೆಯಿಂದ ನ್ಯಾಯ ಸಿಗಬೇಕು, ಆರೋಪಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.
Advertisement
Advertisement
ಕಾಪುವಿನಲ್ಲಿ ಅತೀ ವೇಗವಾಗಿ ಬಂದ ಜೀಪ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಬೆಳಪು ನಿವಾಸಿ ಮಹಮ್ಮದ್ ಹುಸೇನ್ (39) ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು.