ಉಡುಪಿ: ಹಂಪಿಯ ಚಕ್ರತೀರ್ಥದಲ್ಲಿರುವ ಶ್ರೀ ವ್ಯಾಸರಾಜ ತೀರ್ಥರ ಬೃಂದಾವನ ಕೆಡವಿರುವ ಪ್ರಕರಣ ಸಾಕಷ್ಟು ವಿವಾದ ಸೃಷ್ಟಿಸಿದೆ. ಘಟನೆಯನ್ನು ಉಡುಪಿಯ ಅಷ್ಟಮಠಾಧೀಶರು ಖಂಡಿಸಿದ್ದಾರೆ.
ಹಿರಿಯ ಯತಿಗಳಾದ ಪೇಜಾವರ ಮಠದ ವಿಶ್ವೇಶತೀರ್ಥರು ಮಾತನಾಡಿ, ಈ ಕೃತ್ಯದಿಂದ ಕರ್ನಾಟಕಕ್ಕೆ ಆಘಾತವಾಗಿದೆ. ವ್ಯಾಸರಾಜರು ವಿಜಯನಗರ ಸಾಮ್ರಾಜ್ಯದ ಹೆಮ್ಮೆ. ದಾಸ ಸಾಹಿತ್ಯದ ಪ್ರವರ್ತಕಕರು. ಈ ಕೃತ್ಯ ಹಿಂದೂ ಸಮಾಜಕ್ಕೆ ಮಾಡಿರುವ ಅಪಮಾನ, ದೇಶಕ್ಕೆ ಅವಮಾನಕರ ಸಂಗತಿ. ಸರಿಯಾದ ತನಿಖೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಿಧಿಗಾಗಿ ಇತಿಹಾಸದ ಪ್ರಸಿದ್ಧ ನವಬೃಂದಾವನ ಧ್ವಂಸ – ಸಿಡಿದೆದ್ದ ನಟ ಜಗ್ಗೇಶ್
Advertisement
Advertisement
ಮಾಧ್ವ ಪರಂಪರೆಯ ಎಲ್ಲಾ ಯತಿಗಳು ತುರ್ತಾಗಿ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ತಕ್ಷಣವೇ ನವಬೃಂದಾವನ ಸ್ಥಳಕ್ಕೆ ಭೇಟಿ ನೀಡುತ್ತೇವೆ ಎಂದು ಹೇಳಿದರು.
Advertisement
ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಇಂದು ಬೆಳಗ್ಗೆ ಆಘಾತಕಾರಿ ಸುದ್ದಿಯನ್ನು ಕೇಳಿದ್ದೇವೆ. ಇದು ನೋವವನ್ನು ಉಂಟು ಮಾಡಿದೆ. ಈ ಕುರಿತು ತನಿಖೆ ನಡೆಸಿ, ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
Advertisement
ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಪ್ರಕರಣವನ್ನು ಹಿಂದೂ ಸಮಾಜ ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದರು. ಈ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಆಗ್ರಹಿಸಿದರು.
ಏನಿದು ಪ್ರಕರಣ?:
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗುಂದಿ ಸಮೀಪವಿರುವ ನವಬೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ ಸಮಾಧಿಗಳು ಇವೆ. ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಬುಧವಾರ ರಾತ್ರಿ ನವಬೃಂದಾವನವನ್ನು ಅಗೆದು ಹಾಕಿದ್ದಾರೆ. ಸಮಾಧಿಯ ಕೆಳಭಾಗವನ್ನು ಸಹ ಸಂಪೂರ್ಣ ಅಗೆದಿದ್ದರಿಂದ ನಿಧಿಗಾಗಿ ಹೀಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ತಹಶೀಲ್ದಾರ್ ವೀರೇಶ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.