ಉಡುಪಿ: ನಗರದಲ್ಲಿ ಮಟ್ಕಾ ಜುಗಾರಿ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಶಿವಳ್ಳಿ ನಿವಾಸಿ ರಾಮರಾಜ್ ಅಲಿಯಾಸ್ ರಮೇಶ ಅರಸ್ (48) ವಿರುದ್ಧ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಆರೋಪಿಯ ವಿರುದ್ಧ ಉಡುಪಿ (Udupi) ನಗರ ಪೊಲೀಸ್ ಠಾಣೆಯಲ್ಲಿ ಮಟ್ಕಾ ಜುಗಾರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, ಇನ್ನೊಂದು ಪ್ರಕರಣದ ವಿಚಾರಣೆ ಪ್ರಗತಿಯಲ್ಲಿದೆ. ಇದನ್ನೂ ಓದಿ: ಜೋರ್ಡಾನ್ ಮೇಲೆ ಇರಾನ್ ಭೀಕರ ದಾಳಿ – ಇಬ್ಬರು ಯುಎಸ್ ಸೈನಿಕರು ಸಾವು, ಓರ್ವ ನಾಪತ್ತೆ
ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ. ಗಡಿಪಾರು ಅವಧಿಯಲ್ಲಿ ಆರೋಪಿಯು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ತಂಗುವಂತಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
