ಉಡುಪಿ: ರಾಜ್ಯದ ಅತೀದೊಡ್ಡ ಝೀರೋ ಟ್ರಾಫಿಕ್ ನಿರ್ಮಾಣ ಮಾಡಿ ಆರನೇ ತರಗತಿ ವಿದ್ಯಾರ್ಥಿನಿಯನ್ನು ಉಡುಪಿಯಿಂದ ಬೆಂಗಳೂರಿಗೆ ರವಾನೆ ಮಾಡಲಾಗಿದೆ.
ಉಡುಪಿಯ ಬೈಂದೂರಿನ ಗ್ರಾಮದ ಆರನೇ ತರಗತಿ ವಿದ್ಯಾರ್ಥಿನಿ ಅನುಶಾ. ಈಕೆ ಗಂಭೀರವಾದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಳು. ಹೀಗಾಗಿ ಗುರುವಾರ ಅನುಶಾಳನ್ನು ಬೈಂದೂರು ತಾಲೂಕಿನ ಅರೆಶೀರೂರಿನಿಂದ ಉಡುಪಿ-ಮಂಗಳೂರು ಮಾರ್ಗವಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Advertisement
Advertisement
ಉಡುಪಿ ಕಾರ್ಮಿಕ ವೇದಿಕೆ ಅಧ್ಯಕ್ಷ ರವಿ ಶೆಟ್ಟಿ ಅನಾರೋಗ್ಯ ಪೀಡಿತೆಯನ್ನು ಬೆಂಗಳೂರಿಗೆ ರವಾನೆ ಮಾಡುವ ಕೆಲಸದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದರು. ಸುಮಾರು 140 ಕಿಲೋ ಮೀಟರ್ ದೂರದವರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಝೀರೋ ಟ್ರಾಫಿಕ್ ರಸ್ತೆಯನ್ನು ನಿರ್ಮಾಣ ಮಾಡಿದ್ದರು.
Advertisement
ಒಂದು ಪೊಲೀಸ್ ವಾಹನ ಮತ್ತು ಆಂಬುಲೆನ್ಸ್ ಅತೀ ವೇಗದಲ್ಲಿ ಮಂಗಳೂರಿನ ಬಜ್ಪೆ ನಿಲ್ದಾಣಕ್ಕೆ ತಲುಪಿ ಅಲ್ಲಿಂದ 1 ಗಂಟೆಯ ಜೆಟ್ ಏರ್ ವೇಸ್ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಅನುಶಾಳನ್ನು ರವಾನೆ ಮಾಡಲಾಯಿತು. ಹೆಬ್ಬಾಳದ ಆಸ್ಟರ್ ಹಾಸ್ಪಿಟಲ್ ನಲ್ಲಿ ಆಪರೇಷನ್ ನಡೆಸಲಾಗುವುದು. ಬೆಂಗಳೂರು ವೈದ್ಯರು ಉಡುಪಿಗೆ ಬಂದು ಶಸ್ತ್ರಚಿಕಿತ್ಸೆ ಕೊಡಲು 48 ಗಂಟೆ ತಗಲುವುದರಿಂದ ವೈದ್ಯರು ಅನುಶಾಳನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ.
Advertisement
ಮಧ್ಯಾಹ್ನ ಸುಮಾರು 2 ಗಂಟೆಗೆ ಬಂದ ಅನುಶಾಗೆ ಬೆಂಗಳೂರಿನಲ್ಲಿ ಹೆಬ್ಬಾಳದ ಆಸ್ಟರ್ ಆಸ್ಪತ್ರೆಯಲ್ಲಿ ಅನುಶಾಳಿಗೆ ಚಿಕಿತ್ಸೆ ಶುರುಮಾಡಲಾಗಿದೆ. ಅರೆಶೀರೂರು ಹೈಸ್ಕೂಲಿನ ಮುಖ್ಯ ಶಿಕ್ಷಕರ ಮಗಳು ಅನುಶಾ ಕಡು ಬಡತನದಿಂದ ಬಂದವಳು. ಆಕೆಯ ಶಸ್ತ್ರಚಿಕಿತ್ಸೆಗೆ ಹಣಕಾಸಿನ ಅವಶ್ಯಕತೆಯಿದೆ ಎಂದು ಕುಟುಂಬ ಮನವಿ ಮಾಡಿಕೊಂಡಿದೆ.
ಬೈಂದೂರಿನಿಂದ ಕುಂದಾಪುರ- ಉಡುಪಿ, ಪಡುಬಿದ್ರೆ ಮಾರ್ಗವಾಗಿ ಮೂಲ್ಕಿವರೆಗೆ ಉಡುಪಿ ಜಿಲ್ಲಾ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಾರೆ. ಆದರೆ ಉಡುಪಿಯ ಗಡಿ ದಾಟಿ ಮಂಗಳೂರಿಗೆ ಬಂದ ಕೂಡಲೇ ಪೊಲೀಸರು ಅಸಹಾಕಾರ ತೋರಿದ್ದಾರೆ. ಮಾಮೂಲಿಯಂತೆ ಟ್ರಾಫಿಕ್ ರಸ್ತೆಯಲ್ಲಿ ಆಂಬುಲೆನ್ಸ್ ಗೆ ಕಿರಿಕಿರಿ ಮಾಡಿದೆ. ವೇಗವಾಗಿ ಮಂಗಳೂರು ವಿಮಾನ ನಿಲ್ದಾಣ ರೀಚ್ ಆಗಬೇಕಿದ್ದ ಆಂಬುಲೆನ್ಸ್ ತಡವಾಗಿ ತಲುಪಿತು.
ಮಂಗಳೂರು ಜಿಲ್ಲಾ ಪೊಲೀಸರು ಅನುಶಾ ಇದ್ದ ಆಂಬುಲೆನ್ಸ್ ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಲ್ಲ. ವಾಹನ ದಟ್ಟಣೆಯ ನಡುವೆ ನಡುವೆ ಆಂಬುಲೆನ್ಸ್ ನಿಧಾನಗತಿಯಲ್ಲಿ ವಿಮಾನ ನಿಲ್ದಾಣ ತಲುಪದ್ದು, ಸುಮಾರು 15 ನಿಮಿಷಗಳ ಕಾಲ ನಾವು ವಿಳಂಬವಾಗಿ ವಿಮಾನ ನಿಲ್ದಾಣ ತಲುಪಬೇಕಾಯಿತು. ಏರ್ ಪೋರ್ಟ್ ನಿಂದ ಹತ್ತಾರು ಫೋನ್ ಕರೆಗಳು ಬಂದವು ಎಂದು ಆಂಬುಲೆನ್ಸ್ ಜೊತೆಗಿದ್ದ ರವಿಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.