ಉಡುಪಿ: ಸರ್ಕಾರ ಮಧ್ಯಂತರ ಆದೇಶದ ಮೂಲಕ ಕೋರ್ಟ್ ಮೇಲೆ ಒತ್ತಡ ಹಾಕಿದೆ. ರಾಜ್ಯ ಸರ್ಕಾರ ಕೋರ್ಟ್ ತೀರ್ಪಿನ ಮೇಲೆ ಹಸ್ತಕ್ಷೇಪ ಮಾಡಿರುವುದರಿಂದ ಇಂದು ಹಿಜಬ್ ವಿರುದ್ಧ ತೀರ್ಪು ಬಂದಿದೆ ಎಂದು ಉಡುಪಿ ವಿದ್ಯಾರ್ಥಿನಿ ಆಲಿಯಾ ಅಸಾದಿ ಹಿಜಬ್ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಮವಸ್ತ್ರ ಕಡ್ಡಾಯಗೊಳಿಸಿದ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದ ಬಳಿಕ ಮಧ್ಯಾಹ್ನ ಉಡುಪಿಯಲ್ಲಿ ಹಿಜಬ್ ಸಂತ್ರಸ್ತ ವಿದ್ಯಾರ್ಥಿನಿಯರು ಸುದ್ದಿಗೋಷ್ಠಿ ನಡೆಸಿದರು. ಇದನ್ನೂ ಓದಿ: ಮಹಿಳೆಯರು ಎಲ್ಲಿ, ಏನು ಬೇಕಾದರೂ ಧರಿಸಬಹುದು, ಆದರೆ…: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ
Advertisement
Advertisement
ಈ ವೇಳೆ ಮಾತನಾಡಿದ ಆಲಿಯಾ, ನಮಗೆ ನ್ಯಾಯಾಲಯದ ಮೇಲೆ ಬಹಳ ನಿರೀಕ್ಷೆ ಇತ್ತು. ವ್ಯವಸ್ಥೆ ಮೇಲೆ ಬಹಳ ಭರವಸೆ ಇತ್ತು. ಧರ್ಮದಲ್ಲಿ ನಮಗೆ ಹಿಜಬ್ ಅವಕಾಶ ಇತ್ತು. ಎಲ್ಲಾ ಮುಸ್ಲಿಂ ಮಹಿಳೆಯರಿಗೂ ನಮ್ಮ ಧರ್ಮದಲ್ಲಿ ತಲೆ ಮತ್ತು ಎದೆ ಮುಚ್ಚುವ ಅವಕಾಶ ಇದೆ. ಆದರೆ ಹೈಕೋರ್ಟ್ನಲ್ಲಿ ತೀರ್ಪು ನಮ್ಮ ವಿರುದ್ಧ ಬಂದಿದೆ ಎಂದರು.
Advertisement
ನಾವು ಹಿಜಬ್ ತೆಗೆದು ತರಗತಿ ಪ್ರವೇಶಿಸುವುದಿಲ್ಲ. ನಾವು ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಕುರಾನ್‌ನಲ್ಲಿ ದೇಹವನ್ನು ಮುಚ್ಚಬೇಕೆಂಬ ಉಲ್ಲೇಖ ಇದೆ. ಹಿಜಬ್ ಅವಶ್ಯಕತೆ ಇಲ್ಲದಿದ್ದರೆ ನಾವು ಹಿಜಬ್ ತೊಡುತ್ತಿರಲಿಲ್ಲ, ಹೋರಾಟವೂ ಮಾಡುತ್ತಿರಲಿಲ್ಲ. ನಮಗೆ ಶಿಕ್ಷಣ ಹಾಗೂ ಹಿಜಬ್ ಎರಡೂ ಬೇಕು ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಹಿಜಬ್ ವಿಚಾರವನ್ನ ಅನಗತ್ಯವಾಗಿ ವಿವಾದ ಮಾಡದೆ ಸ್ವಾಗತಿಸಬೇಕು: ಬಿಎಸ್‍ವೈ
Advertisement
ಇಲ್ಲಿ ನಮಗೆ ನ್ಯಾಯ ಇಲ್ಲ ಎಂದು ಅನ್ನಿಸುತ್ತಿದೆ. ನಮ್ಮನ್ನು ಇಲ್ಲಿ ಬೇರೆಯೇ ರೀತಿಯಲ್ಲಿ ನೋಡುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಈ ಸಮಸ್ಯೆ ಅನುಭವಿಸುತ್ತಿದ್ದೇವೆ. ಈ ಬಗ್ಗೆ ನಾವು ಡಿಸಿ, ಡಿಡಿಪಿಐ ಭೇಟಿ ಮಾಡಿದರೂ ನ್ಯಾಯ ಸಿಗಲಿಲ್ಲ. ನಾವು ಜಾತ್ಯಾತೀತ ದೇಶದಲ್ಲಿ ಇದ್ದೇವೆ ಎನಿಸುತ್ತಿದೆ ಎಂದು ಹಿಜಬ್ ಹೋರಾಟಗಾರ್ತಿ ಅಲ್ಮಾಸ್ ಹೇಳಿಕೆ ನೀಡಿದ್ದಾರೆ.
ರಾಜಕೀಯ ಲಾಭಕ್ಕೆ ಹಿಜಬ್ ವಿಚಾರವನ್ನು ಕಮ್ಯೂನಲ್ ಮಾಡಲಾಗಿದೆ. ರಾಜಕೀಯ ದುರುದ್ದೇಶದಿಂದ ಎಲ್ಲರೂ ದೊಡ್ಡ ವಿಷಯ ಮಾಡಿದರು. ಇದೀಗ ಎಲ್ಲರ ಶಿಕ್ಷಣ ಕ್ಕೆ ಬಹಳ ಸಮಸ್ಯೆ ಆಗಿದೆ. ನಮ್ಮ ಪ್ರಾಂಶುಪಾಲರು ಹಿಜಬ್‌ಗೆ ಅವಕಾಶ ಕೊಟ್ಟಿದ್ದರೆ ಇಷ್ಟೊಂದು ದೊಡ್ಡ ಪ್ರಕರಣ ಆಗುತ್ತಿರಲಿಲ್ಲ ಎಂದರು.
ಡಾ. ಬಿಆರ್ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿದ್ದಾರೆ. ಅಂಬೇಡ್ಕರ್ ಬದುಕಿದ್ದರೆ ಇಂದು ಕಣ್ಣೀರು ಹಾಕುತ್ತಿದ್ದರು. ಸಂವಿಧಾನದ ಈಗಿನ ಪರಿಸ್ಥಿತಿ ನೋಡಿ ಮರುಗುತಿದ್ದರು ಎಂದು ಅಲ್ಮಾಸ್ ಹೇಳಿದರು.
ನಮ್ಮ ಮುಂದಿನ ನಡೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾವು ನಮ್ಮ ವಕೀಲರ ಜೊತೆ ಚರ್ಚೆ ಮಾಡುತ್ತಿದ್ದೇವೆ. ನಾವು ಈಗಾಗಲೇ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ. ಈಗ ಬಂದ ತೀರ್ಪಿನಿಂದ ನಾವು ಬಹಳ ನೊಂದಿದ್ದೇವೆ ಎಂದು ಅಲ್ಮಾಸ್ ಅಸಮಧಾನ ವ್ಯಕ್ತಪಡಿಸಿದ್ದಾರೆ.