ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣ ಪರಾಕಾಷ್ಠೆ ತಲುಪಿದೆ. ವಿನಾಶ ಕಾಲೇ ವಿಪರೀತ ಬುದ್ಧಿ ಇದು ಎಂದು ವಿಪಕ್ಷ ಮುಖ್ಯ ಸಚೇತಕ, ಕಾರ್ಕಳ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕಾರ್ಕಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ವಿವಾದಾತ್ಮಕ ಸುತ್ತೋಲೆ ಹೊರಡಿಸಿದೆ. ಇದು ಮುಸ್ಲೀಮರ ತುಷ್ಟೀಕರಣದ ಪರಾಕಾಷ್ಠೆ ತಲುಪಿದ ವರ್ತನೆ. ಈ ಬೆಳವಣಿಗೆ ವಿಷಾದನೀಯ ಮತ್ತು ಖಂಡನೀಯ. ಹಿಂದೂ ಹತ್ಯೆಯ ಆರೋಪಿಗಳಿಗೆ ಸರ್ಕಾರ ಈ ಮೂಲಕ ಕುಮ್ಮಕ್ಕು ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಲ್ಪಸಂಖ್ಯಾತರಿಗೆ ಸಿಕ್ತು ಕ್ಲೀನ್‍ಚಿಟ್ ಭಾಗ್ಯ- ಸರ್ಕಾರದಿಂದಲೇ ಹಿಂದೂ-ಮುಸ್ಲಿಂ ಇಬ್ಭಾಗ ಕೆಲಸ
Advertisement
ಕಾಂಗ್ರೆಸ್ ಮೇಲೆ ಬಿಜೆಪಿ ಆರೋಪ ಮಾಡುತ್ತಲೇ ಬಂದಿದೆ. ಈಗ ಸರ್ಕಾರ ಸುತ್ತೋಲೆ ಹೊರಡಿಸುವ ಮೂಲಕ ನಮ್ಮ ಆರೋಪವನ್ನು ಕಾಂಗ್ರೆಸ್ ಸಾಬೀತು ಮಾಡಿದೆ ಎಂದರು. ಚುನಾವಣೆ ಸಂದರ್ಭದಲ್ಲಿ ಮತ್ತೊಂದು ಗಲಭೆ ಸೃಷ್ಟಿಸಲು ಸರ್ಕಾರ ಯೋಜನೆ ಹಾಕಿದೆ. ಹಿಂದೂ ಯುವಕರ ಹತ್ಯೆಯ ಆರೋಪಿಗಳನ್ನು ರಕ್ಷಿಸುವ ಕೆಲಸ ಸರ್ಕಾರ ಮಾಡುತ್ತಿದೆ. ನೆನ್ನೆ ಸರ್ಕಾರಿ ಪ್ರಾಯೋಜಿತ ಬಂದ್ ಆಗಿದೆ. ಇದೀಗ ಸರ್ಕಾರಿ ಪ್ರಾಯೋಜಿತ ಗಲಭೆ ಮಾಡಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ದೂರಿದರು. ಇದನ್ನೂ ಓದಿ: ಅಲ್ಪಸಂಖ್ಯಾತರಿಗೆ ಕ್ಲೀನ್ ಚಿಟ್ ಭಾಗ್ಯ- ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ ಕೊಟ್ಟಿದ್ದು ಹೀಗೆ
Advertisement
ರಾಜ್ಯದ ಜನ ಈ ಬೆಳವಣಿಗೆ ಸಹಿಸಲ್ಲ. ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ಕೊಡುತ್ತಾರೆ. ಸರ್ಕಾರ ಕೂಡಲೇ ವಿವಾದಿತ ಸುತ್ತೋಲೆ ವಾಪಾಸ್ ಪಡೆಯಬೇಕು. ಇಲ್ಲದಿದ್ದಲ್ಲಿ ರಾಜ್ಯವ್ಯಾಪಿ ಹೋರಾಟ ಮಾಡಲು ಬಿಜೆಪಿ ಸಿದ್ಧತೆ ಮಾಡುತ್ತದೆ ಎಂದರು. ಇದನ್ನೂ ಓದಿ: 20% ವೋಟ್ ಬ್ಯಾಂಕಿಗೆ ಕೇಸ್ ವಾಪಸ್: ಸಿಎಂ ವಿರುದ್ಧ ಡಿವಿಎಸ್ ಕಿಡಿ