ಉಡುಪಿ: ಸುರತ್ಕಲ್ ನ ಯುವಕ ಫಾಜಿಲ್ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ವೇಳೆ ಆರೋಪಿಗಳು ಇಯಾನ್ ಕಾರು ಬಳಸಿರುವ ಮಾಹಿತಿ ಹೊರ ಬೀಳುತ್ತಿದ್ದಂತೆಯೇ ಉಡುಪಿ ಜಿಲ್ಲೆಯ ನಿರ್ಜನ ಪ್ರದೇಶವೊಂದರಲ್ಲಿ ಅಪರಿಚಿತ ಇಯಾನ್ ಕಾರೊಂದು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಇಯಾನ್ ಕಾರೊಂದು ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಸುರತ್ಕಲ್‍ನ ಫಾಜಿಲ್ ಹತ್ಯೆಯ ಬಳಿಕ ಇಯಾನ್ ಕಾರೊಂದರಲ್ಲಿ ಆರೋಪಿಗಳು ಎಸ್ಕೇಪ್ ಆಗಿರುವ ಬಗ್ಗೆ ಪೊಲೀಸರಿಗೆ ಅನುಮಾನವಿದೆ. ಈ ನಡುವೆ ಇದೀಗ ನಿರ್ಜನ ಪ್ರದೇಶದಲ್ಲಿ ಇಯಾನ್ ಕಾರ್ ಸಿಕ್ಕಿರಿವುದು ಇನ್ನಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇದನ್ನೂ ಓದಿ: ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್
ಕಾರ್ ಪತ್ತೆಯಾದ ಸ್ಥಳಕ್ಕೆ ಕೂಡಲೇ ಮಂಗಳೂರು ಮತ್ತು ಉಡುಪಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಫಾಜಿಲ್ ಹತ್ಯೆ ಸಂಬಂಧ 51 ಜನರನ್ನು ವಿಚಾರಣೆ ಮಾಡಲಾಗಿತ್ತು. 8 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಘಟನೆ ಬಳಿಕ ಸಿಸಿಟಿವಿ ದೃಶ್ಯ ಆಧರಿಸಿ 8 ಇಯಾನ್ ಕಾರ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಸಿಸಿಟಿವಿಯಲ್ಲಿ ಕಾರಿನ ನಂಬರ್ ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ. ಆದರೆ ಕಾರಿನ ಇತರ ಗುರುತುಗಳನ್ನು ಹಿಡಿದು ವಿಚಾರಣೆ ನಡೆಸಿ ಕಾರಿನ ಮಾಲೀಕ ಅಜಿತ್‍ನನ್ನು ಬಂಧಿಸಲಾಗಿತ್ತು. ಆದರೆ ಕೃತ್ಯಕ್ಕೆ ಬಳಸಿದ್ದ ಕಾರ್ ನಾಪತ್ತೆಯಾಗಿತ್ತು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ, 5 ಲಕ್ಷ ಪರಿಹಾರ
ಅಜಿತ್‍ನಿಂದ ಆರೋಪಿಗಳು ಕಾರ್ ಬಾಡಿಗೆಗೆ ಪಡೆದು ಕೊಲೆ ಮಾಡಿ ಬಳಿಕ ಎಸ್ಕೇಪ್ ಆಗಿದ್ದರು. ನಂತರ ಮಂಗಳೂರು ಪೊಲೀಸರು ತನಿಖೆ ನಡೆಸಿದಾಗ ಅಜಿತ್ ಕಾರ್‍ನ ಮಾಲೀಕ ಎಂಬುದು ತಿಳಿದುಬಂದಿತ್ತು. ಕಾರ್ ನಾಪತ್ತೆಯಾಗಿರುವ ಬಗ್ಗೆ ಇಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ಹಂಚಿಕೊಂಡಿದ್ದರು.
ಈ ಬೆನ್ನಲ್ಲೇ ಉಡುಪಿಯಲ್ಲಿ ಅಪರಿಚಿತ ಇಯಾನ್ ಕಾರೊಂದು ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿರುವುದು ಅನುಮಾನ ಹುಟ್ಟುಹಾಕಿದ್ದು, ಆರೋಪಿಗಳು ಎಸ್ಕೇಪ್ ಆಗಿರುವ ಇಯೋನ್ ಕಾರು ಇದೇನಾ ಎಂಬ ಸತ್ಯ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.