ಪೊಲೀಸರಿಗೆ ತ್ರಿಶೂಲಗಳನ್ನು ಕೊಟ್ಟು ಹಿಂಸೆಯ ದೀಕ್ಷೆ ಕೊಡಿ: ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಿಡಿ

Public TV
1 Min Read
Udupi Vijayapura police in saffron siddaramaiah Slams CM Basavaraj Bommai

ಬೆಂಗಳೂರು: ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದ್ದೀರಿ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ ಎಂದು ಪ್ರಶ್ನಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ವಿರುದ್ಧ ಕಿಡಿ ಕಾರಿದ್ದಾರೆ.

ದಸರಾ ಹಬ್ಬದ ಸಂದರ್ಭದಲ್ಲಿ ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆ ಮತ್ತು ಉಡುಪಿಯ ಕಾಪು ಪೊಲೀಸ್‌ ಠಾಣೆಯ ಸಿಬ್ಬಂದಿ ಕೇಸರಿ ಶಾಲನ್ನು ಧರಿಸಿ ಠಾಣೆಯ ಮುಂದೆ ಗ್ರೂಪ್‌ ಪೋಟೋ ತೆಗೆಸಿಕೊಂಡಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Udupi Vijayapura police saffron 2

ಟ್ವೀಟ್‌ನಲ್ಲಿ ಏನಿದೆ?
ಪೊಲೀಸರ ಧಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಸಿಎಂ ಬೊಮ್ಮಾಯಿ ಅವರೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು.

ಒಂದೆಡೆ ಅಮಾಯಕ ಯುವಕ, ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಬಹಿರಂಗ ಬೆಂಬಲ ರಾಜ್ಯದಲ್ಲಿ ಸರ್ಕಾರ ಇದೆಯೇ? ಇದನ್ನೂ ಓದಿ: RSS ಮುಖಂಡರು ಹೇಳುವ ಕೆಲವು ವಿಚಾರ ಸರಿ ಇರುತ್ತವೆ: ಹೊರಟ್ಟಿ

Udupi Vijayapura police saffron 1

ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ಬೊಮ್ಮಾಯಿ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ. ಇದನ್ನೂ ಓದಿ: RSS ಒಂದು ಕೋಮುವಾದಿ ಸಂಘಟನೆ- ಸಿದ್ದರಾಮಯ್ಯ

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ್‌ ಅವರ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಸಿಎಂ ಬೊಮ್ಮಾಯಿ ಅವರೇ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ.

Share This Article
Leave a Comment

Leave a Reply

Your email address will not be published. Required fields are marked *