ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಉಡುಪಿ ಯುವಕ

Public TV
1 Min Read
ABIN

ಉಡುಪಿ: ಅಸ್ಸಾಂನ (Assam )ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ (Khelo India National Games) ಉಡುಪಿಯ (Udupi) ಕ್ರೀಡಾಪಟು ಒಬ್ಬರು ಚಿನ್ನದ ಪದಕ ಗೆದ್ದಿದ್ದಾರೆ.

200 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಅಭಿನ್ ದೇವಾಡಿಗ, 21 ಸೆಕೆಂಡ್‍ಗಳಲ್ಲಿ ಗುರಿ ಮುಟ್ಟಿದ್ದಾರೆ. ಬೆಂಗಳೂರಿನ ಜೈನ್ ಯುನಿವರ್ಸಿಟಿಯಲ್ಲಿ ಓದುತ್ತಿರುವ ಅವರು, ಉಡುಪಿ ಅಜ್ಜರಕಾಡು ಕ್ರೀಡಾಂಗಣದ ಟ್ರ್ಯಾಕ್ ಆಂಡ್ ಫೀಲ್ಡ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: WPL 2024: ಆರ್‌ಸಿಬಿಯಲ್ಲಿ ಲೇಡಿ ʻಎಬಿಡಿʼ – ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ಟ್ರೆಂಡ್‌!

ಉಡುಪಿಯ ಜಹೀರ್ ಅಬ್ಬಾಸ್ ಗರಡಿಯಲ್ಲಿ 2017ರಿಂದ ತೊಡಗಿಕೊಂಡಿದ್ದು, ಈವರೆಗೆ ರಾಷ್ಟ್ರೀಯ ಮಟ್ಟದಲ್ಲಿ ಅಭೀನ್ ಮೂರು ಚಿನ್ನದ ಪದಕ ಗೆದ್ದಿದ್ದಾರೆ. ಸಂಸ್ಥೆಯಲ್ಲಿ ಈವರೆಗೆ 200ಕ್ಕೂ ಹೆಚ್ಚು ಕ್ರೀಡಾಪಟುಗಳು ತಯಾರಾಗಿದ್ದು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ 600ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಇದನ್ನೂ ಓದಿ: PublicTV Explainer: ಬಿಸಿಸಿಐ ಕೇಂದ್ರ ಗುತ್ತಿಗೆ ಬಗ್ಗೆ ನಿಮಗೆಷ್ಟು ಗೊತ್ತು?

Share This Article