ಬೆಂಗಳೂರು: ಗಡಿ ಭಾಗದಲ್ಲಿನ ಸೇನಾ ಉದ್ವಿಗ್ನತೆಯಿಂದ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳಿಗೆ (Jammu And Kashmir Students) ಯುಜಿಸಿಇಟಿ-25 ಪ್ರವೇಶ ಸಲುವಾಗಿ ನಡೆಸುವ ಮೂಲ ದಾಖಲೆಗಳ ಪರಿಶೀಲನೆಗೆ ಮತ್ತೊಮ್ಮೆ ಅವಕಾಶ ನೀಡಲಾಗುವುದು. ಈ ವಿಷಯದಲ್ಲಿ ಆತಂಕ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಸಿಇಟಿ ಸಲುವಾಗಿ ಜಮ್ಮು ಕಾಶ್ಮೀರದ ಒಟ್ಟು 204 ಮಂದಿ ಪರೀಕ್ಷೆ (CET Exam) ಬರೆದಿದ್ದು, ಅವರಲ್ಲಿ ಇದುವರೆಗೂ ಕೇವಲ 52 ಮಂದಿ ಮಾತ್ರ ದಾಖಲೆ ಪರಿಶೀಲನೆ ಮಾಡಿಸಿಕೊಂಡಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಶಕ್ತಿಶಾಲಿ ಅಸ್ತ್ರಗಳಿಂದಲೇ ಪಾಕ್‌ಗೆ ಶತಕೋಟಿ ಲಾಸ್ – ದಿವಾಳಿಯತ್ತ ʻಭಿಕಾರಿಸ್ತಾನʼ
ಗಡಿ ಭಾಗದಲ್ಲಿ ಪರಿಸ್ಥಿತಿಯ ಅರಿವು ಇರುವ ಕಾರಣಕ್ಕೆ ಅವರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಒಂದು ವೇಳೆ 10- 15 ದಿನಗಳ ನಂತರವೂ ಪರಿಸ್ಥಿತಿ ಸುಧಾರಿಸದೇ ಇದ್ದರೆ ವಿಡಿಯೋ ಸಂವಾದದ ಮೂಲಕವೇ ದಾಖಲೆಗಳ ಪರಿಶೀಲನೆ ಮಾಡಲಾಗುವುದು. ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಾಯುನೆಲೆಯ ಮೇಲೆ ಭಾರತ ದಾಳಿ – ಇಸ್ಲಾಮಾಬಾದ್, ರಾವಲ್ಪಿಂಡಿಯಲ್ಲಿ ಅಲ್ಲೋಲ ಕಲ್ಲೋಲ
ಈ ಕುರಿತು ಈ ಎಲ್ಲ ಅಭ್ಯರ್ಥಿಗಳಿಗೆ ಪ್ರತ್ಯೇಕ ಸಂದೇಶ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ತತ್ತರ – ಇಸ್ಲಾಮಾಬಾದ್‌ನಲ್ಲಿ 48 ಗಂಟೆಗಳವರೆಗೆ ಪೆಟ್ರೋಲ್ ಪಂಪ್‌ಗಳು ಬಂದ್