ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬುಧವಾರ ಪ್ರಕಟಿಸಿದೆ.
ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಸೆ.19ರೊಳಗೆ ನಿಗದಿತ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿಯನ್ನು ಡೌನ್ಲೋಡ್ ಮಾಡಿಕೊಂಡು ಸೆ.21ರೊಳಗೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಒಟ್ಟು 12,010 ವೈದ್ಯಕೀಯ ಸೀಟುಗಳ ಪೈಕಿ 11,551 ಸೀಟುಗಳು ಹಂಚಿಕೆಯಾಗಿದ್ದು, ಇನ್ನೂ 459 ಸೀಟುಗಳು ಉಳಿದಿವೆ. ದಂತ ವೈದ್ಯಕೀಯ ಕೋರ್ಸ್ನಲ್ಲಿದ್ದ ಎಲ್ಲ 2,689 ಸೀಟುಗಳೂ ಹಂಚಿಕೆಯಾಗಿವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ – ಇನ್ಸ್ಪೆಕ್ಟರ್ ಧನಂಜಯ್ ಪರ ಯತೀಂದ್ರ ಬ್ಯಾಟಿಂಗ್

