ಹಿಂದೂ ಧರ್ಮದ (Hindu Religion) ಬಹುತೇಕ ಆಚರಣೆಗಳು ಪ್ರಕೃತಿಯೊಂದಿಗೆ ಸಂಬಂಧ ಹೊಂದಿವೆ. ಅದೇ ರೀತಿ ಯುಗಾದಿ ಹಬ್ಬ (Ugadi Festival) ಸಹ ಪ್ರಕೃತಿ ವಸಂತ ಕಾಲದ ಉತ್ತುಂಗದಲ್ಲಿದ್ದಾಗ ಆಚರಿಸುವ ವಿಶೇಷ ಹಬ್ಬವಾಗಿದೆ. ಈ ಸಮಯದಲ್ಲಿ ಪ್ರಕೃತಿಯೇ ಹಸಿರು, ಹೂವಿನ ತಳಿರು ತೋರಣ ಕಟ್ಟಿ ಸಂಭ್ರಮಿಸುತ್ತಿರುತ್ತದೆ. ಈ ಹಬ್ಬದಂದು ಸಂಜೆ ಚಂದ್ರನ (Moon) ದರ್ಶನಕ್ಕೆ ಸಹ ವಿಶೇಷ ಮಹತ್ವವಿದೆ.
ಗಣಪತಿ ತನ್ನ ವಾಹನ ಇಲಿಯನ್ನೇರಿ ಹೋಗುತ್ತಿದ್ದಾಗ ಆಯತಪ್ಪಿ ಬೀಳುತ್ತಾನೆ. ಇದನ್ನು ಕಂಡು ಆಕಾಶದಲ್ಲಿದ್ದ ಚಂದ್ರ ನಗುತ್ತಾನೆ. ಇದನ್ನು ನೋಡಿದ ಗಣೇಶ, ಚೌತಿಯ ದಿನ ಚಂದ್ರನನ್ನು ನೋಡಿದರೆ ಅಪವಾದ ಬರಲಿ ಎಂದು ಶಾಪ ನೀಡುತ್ತಾನೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಶಾಪ ವಿಮೋಚನೆಗೆ ಯುಗಾದಿ ಚಂದ್ರನ ದರ್ಶನ ಮಾಡಬೇಕು ಎಂಬ ನಂಬಿಕೆ ಇದೆ.
Advertisement
Advertisement
ಚಂದ್ರ ಶುದ್ಧತೆ, ಬುದ್ಧಿವಂತಿಕೆಯ ಸಂಕೇತ
Advertisement
ಹಿಂದೂ ಧರ್ಮದ ಪ್ರಕಾರ, ಚಂದ್ರ ನವಗ್ರಹಗಳಲ್ಲಿ ಒಬ್ಬ, ಶುದ್ಧತೆ, ಬುದ್ಧಿವಂತಿಕೆ ಹಾಗೂ ಉತ್ತಮ ನಡವಳಿಕೆಯ ಸಂಕೇತವಾಗಿ ಆತನನ್ನು ಬಿಂಬಿಸಲಾಗುತ್ತದೆ. ಅಂತಹ ಚಂದ್ರನನ್ನು ವರ್ಷದ ಆದಿ ಪರ್ವವಾದ ಯುಗಾದಿಯಂದು ದರ್ಶನ ಪಡೆದರೆ, ಇಡೀ ವರ್ಷವೆಲ್ಲಾ ಸುಖ-ಸಂತೋಷದಿಂದ ಇರುತ್ತಾರೆ ಎಂಬ ನಂಬಿಕೆ ಇದೆ. ಇದೇ ನಂಬಿಕೆಯಿಂದ ಹಿಂದಿನಿಂದಲೂ ಯುಗಾದಿ ಚಂದ್ರನನ್ನು ನೋಡುವುದು ವಾಡಿಕೆಯಾಗಿದೆ. ಯುಗಾದಿಯ ಹಿಂದಿನ ದಿನ ಅಮಾವಾಸ್ಯೆಯಲ್ಲಿ ಬರುವುದರಿಂದ ಮರು ದಿನ ಚಂದ್ರನ ದರ್ಶನಕ್ಕೆ ಪುಣ್ಯ ಮಾಡಿರಬೇಕು!
Advertisement
ಚಂದ್ರ ದರ್ಶನದಿಂದ ಮಳೆ-ಬೆಳೆ ಲೆಕ್ಕಾಚಾರ
ಯುಗಾದಿ ದಿನದಂದು ಕಾಣಿಸುವ ಚಂದ್ರನನ್ನು ಆಧರಿಸಿ ಹಿಂದೆ ಆ ವರ್ಷದ ಮಳೆ-ಬೆಳೆ, ರೋಗ-ರುಜಿನಗಳು, ಏಳು-ಬೀಳುಗಳ ಬಗ್ಗೆ ಚಿಂತನೆ ಮಾಡುತ್ತಿದ್ದರು. ಯುಗಾದಿಯಂದು ಚಂದ್ರನು ಅತ್ಯಂತ ಚಿಕ್ಕದಾಗಿ ಸಣ್ಣ ಗೆರೆಯ ರೀತಿಯಲ್ಲಿ ಕಾಣ ಸಿಗುತ್ತಾನೆ. ಇದನ್ನು ಆಧರಿಸಿ ವರ್ಷದ ಭವಿಷ್ಯವನ್ನು ನಿರ್ಧರಿಸುತ್ತಿದ್ದರು. ಅದಕ್ಕೆಂದೇ ಹೊಸ ವರ್ಷದ ಪಂಚಾಂಗವನ್ನು ಪಠಿಸಿ, ಅನಂತರ ಚಂದ್ರ ದರ್ಶನವನ್ನು ಮಾಡಲಾಗುತ್ತದೆ.