ಹುಬ್ಬಳ್ಳಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಯುಜಿಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಜೂ.16, 17 ರಂದು ಹುಬ್ಬಳ್ಳಿಯ 10 ಹಾಗೂ ಧಾರವಾಡದ 16 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ.
ಜೂ.16ರಂದು ಬೆಳಗ್ಗೆ 10:30 ರಿಂದ 11:50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50 ರವರೆಗೆ ಗಣಿತ ಪರೀಕ್ಷೆಗಳು, ಜೂ.17ರಂದು ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30ರಿಂದ 3:50 ರವರೆಗೆ ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯಲಿದೆ. ಇದನ್ನೂ ಓದಿ: ದೇವಸ್ಥಾನದಲ್ಲಿ ಅರ್ಚಕರ ಶವ ಪತ್ತೆ, ವಿಗ್ರಹ ನಾಪತ್ತೆ
Advertisement
Advertisement
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
Advertisement
ಪರೀಕ್ಷಾ ಕೇಂದ್ರಗಳ ಸಮೀಪದ ಸ್ಕ್ಯಾನಿಂಗ್, ಜೆರಾಕ್ಸ್ ಮತ್ತು ಕಂಪ್ಯೂಟರ್ ಕೇಂದ್ರಗಳು ಪರೀಕ್ಷೆಯ ಸಮಯದಲ್ಲಿ ಕಾರ್ಯ ನಿರ್ವಹಿಸದಂತೆ ನಿರ್ಬಂಧಿಸಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ. ಇದನ್ನೂ ಓದಿ: ಮೆಟ್ರೋ ಟ್ರೈನ್‍ನಲ್ಲಿ ಬೈಸಿಕಲ್ ಕೊಂಡೊಯ್ಯಲು ಅವಕಾಶ
Advertisement
ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮ ಕೈಗೊಳ್ಳುವಂತೆ ಠಾಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತ ಲಾಭೂರಾಮ್ ತಿಳಿಸಿದ್ದಾರೆ.