ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಲ್ಲಿಸಿದ ಸಿಇಟಿ (CET) ಅರ್ಜಿಯಲ್ಲಿ ವಿಕಲಚೇತನರ ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ (Medical Counselling) ಮೇ 28ರಿಂದ ಮೂರು ದಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ.
#UGCET-25 ವಿಕಲಚೇತನರ ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಮೇ 28, 29, 30ರಂದು #KEA ಕಚೇರಿಯಲ್ಲಿ ನಡೆಯಲಿದೆ.
ಸೂಕ್ತ ದಿನಾಂಕವನ್ನು ಮುಂಗಡವಾಗಿ ಕಾಯ್ದಿರಿಸಲು ಮೇ 26ರಂದು ಕೆಇಎ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು.https://t.co/0YG7YIyO8E@CMofKarnataka @drmcsudhakar @KEA_karnataka
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 19, 2025
ಮೇ 28ರಿಂದ 30ರವರೆಗೆ ವೈದ್ಯಕೀಯ ತಪಾಸಣೆ ನಡೆಯಲಿದೆ. ಇದಕ್ಕೆ ಸೂಕ್ತ ದಿನಾಂಕ ಮತ್ತು ಸಮಯವನ್ನು ಮುಂಗಡವಾಗಿ ಕಾಯ್ದಿರಿಸಲು ಮೇ 26ರಂದು ಕೆಇಎ ವೆಬ್‌ಸೈಟ್‌ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವೈದ್ಯರ ಸಮಿತಿ ವತಿಯಿಂದ ವೈದ್ಯಕೀಯ ತಪಾಸಣೆ ಮಾಡಿ, ಕ್ಲೇಮ್ ಪ್ರಕಾರ ಅರ್ಹರಾಗಿದ್ದಾರೆಯೇ ಎಂಬುದನ್ನು ತೀರ್ಮಾನಿಸಲಾಗುತ್ತದೆ. ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಸಮೇತ ತಪಾಸಣೆಗೆ ಬರಬೇಕು ಎಂದು ಅವರು ಕೋರಿದ್ದಾರೆ.