ಬೆಂಗಳೂರು: ಯುಜಿನೀಟ್-24 (UGNEET) ಮಾಪ್ ಅಪ್ ಸುತ್ತಿನಲ್ಲಿ ವೈದ್ಯಕೀಯ ಸೀಟು (Medical Seat) ಹಂಚಿಕೆಯಾಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಸಮೇತ ಸಂಬಂಧಪಟ್ಟ ಕಾಲೇಜುಗಳಿಗೇ ಹೋಗಿ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.
Advertisement
ವೈದ್ಯಕೀಯ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ದಾಖಲೆ ಸಲ್ಲಿಸಲು ಅ.21ರಂದು ಕೆಇಎ ಕಚೇರಿಗೆ ಬರುವ ಅಗತ್ಯ ಇಲ್ಲ. ಶುಲ್ಕ ಪಾವತಿ ಮಾಡುವುದಕ್ಕೆ ಮತ್ತು ಕಾಲೇಜಿಗೆ ದಾಖಲೆ ಸಲ್ಲಿಸಿ ವರದಿ ಮಾಡಿಕೊಳ್ಳಲು ಅ. 22ರ ವರೆಗೂ ಅವಕಾಶ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲೇ ಪತ್ರ ಬರೆದು ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದ ಪವನ್ ಕಲ್ಯಾಣ್
Advertisement
ಈ ಮುಂಚೆ ಮೂಲ ದಾಖಲೆಗಳನ್ನು ಸಲ್ಲಿಸಲು ಕೆಇಎಗೆ ಬರುವಂತೆ ಸೂಚಿಸಿದ್ದನ್ನು ಸ್ಮರಿಸಬಹುದು. ಇದನ್ನೂ ಓದಿ: 36 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಟೆಸ್ಟ್ ಗೆದ್ದ ಕಿವೀಸ್ – ಟೀಂ ಇಂಡಿಯಾ ಸೋಲಿಗೆ ಕಾರಣಗಳೇನು?