ಭೋಪಾಲ್: ಉಜ್ಜಯಿನಿಯ (Ujjain) 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ಆಟೋ ಚಾಲಕ ಸೇರಿದಂತೆ ಐವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಶಂಕಿತರ ವಿಚಾರಣೆ ನಡೆಸಲಾಗುತ್ತಿದೆ ಎಂದು ಉಜ್ಜಯಿನಿಯ ಎಸ್‍ಪಿ ಸಚಿನ್ ಶರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಾಲಕಿ ಸತ್ನಾದಿಂದ ಬಂದಿದ್ದಾಳೆ ಎಂದು ತಿಳಿದು ಬಂದಿದೆ. ಸಂತ್ರಸ್ತೆಯ ಪೋಷಕರನ್ನು ಗುರುತಿಸಲಾಗಿದೆ. ಅತ್ಯಾಚಾರದ ಬಳಿಕ ಬಾಲಕಿ ಸಹಾಯಕ್ಕಾಗಿ 8 ಕಿಲೋಮೀಟರ್ ದೂರ ನಡೆದಿದ್ದಾಳೆ ಎಂದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದು ಬಂದಿದೆ. ಅಲ್ಲದೇ ಆಕೆ ಸಹಾಯಕ್ಕಾಗಿ ಮನೆ ಮನೆಗೆ ತೆರಳುತ್ತಿರುವುದು, ಈ ವೇಳೆ ವ್ಯಕ್ತಿಯೊಬ್ಬ ಆಕೆಯನ್ನು ಓಡಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ – ಅರೆಬೆತ್ತಲಾಗಿ ಸಹಾಯಕ್ಕಾಗಿ ಅಂಗಲಾಚಿದ ಬಾಲಕಿ
Advertisement
Advertisement
ಮಧ್ಯಪ್ರದೇಶದ (Madhya Pradesh) ಉಜ್ಜಯಿನಿ ನಗರದಲ್ಲಿ ಅತ್ಯಾಚಾರಕ್ಕೊಳಗಾಗಿ ತೀವ್ರ ರಕ್ತಸ್ರಾವದಿಂದ ಬಾಲಕಿ ಸಹಾಯಕ್ಕಾಗಿ ರಸ್ತೆಯಲ್ಲಿ ಓಡಾಡಿದ್ದಳು. ಬಳಿಕ ಆಕೆಯನ್ನು ಆಶ್ರಮವೊಂದರ ಅರ್ಚಕರು ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ತಜ್ಞ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನೀಡಿತ್ತು. ವೈದ್ಯರು ಆಕೆಯ ಸ್ಥಿತಿ ಗಂಭೀರವಾಗಿದೆ ಆದರೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ತಿಳಿಸಿದ್ದಾರೆ.
Advertisement
Advertisement
ಭಾರೀ ಜನಾಕ್ರೋಶದ ನಂತರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‍ಐಟಿ) ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳರ ಮೇಲೆ ಹಲ್ಲೆ ಎಂದು ಫೇಕ್ ವೀಡಿಯೋ ಹಂಚಿಕೆ – ಇಬ್ಬರ ವಿರುದ್ಧ ಎಫ್‍ಐಆರ್
Web Stories