ಲಂಡನ್: ಅಮೆರಿಕದ (USA) ತೀವ್ರ ವಿರೋಧದ ನಡುವೆಯೂ ಬ್ರಿಟನ್ ಸರ್ಕಾರವು ಪ್ಯಾಲೆಸ್ಟೀನ್‌ಗೆ (Palestine) ದೇಶದ ಮಾನ್ಯತೆ ನೀಡಲು ಮುಂದಾಗಿದೆ.
ಗಾಜಾದಲ್ಲಿ ನಡೆಸುತ್ತಿರುವ ಯುದ್ಧ ಸಂಬಂಧ ಬ್ರಿಟನ್ ಸರ್ಕಾರ ಇಸ್ರೇಲ್‌ಗೆ (Israel) ಕೆಲ ನಿಬಂಧನೆ ವಿಧಿಸಿತ್ತು. ಆದ್ರೆ ಇಸ್ರೇಲ್ ನಿಬಂಧನೆ ಪಾಲಿಸದ ಹಿನ್ನೆಲೆ ಬ್ರಿಟನ್ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಗಾಜಾ ಮೇಲೆ ಇಸ್ರೇಲ್ ದಾಳಿ – ಒಂದೇ ದಿನ 91 ಮಂದಿ ಸಾವು
ಸೋಮವಾರದಿಂದ (ಸೆ.22) ವಿಶ್ವಸಂಸ್ಥೆಯ (United Nations) 80ನೇ ಸಾಮಾನ್ಯ ಸಭೆ ಆರಂಭವಾಗಲಿದೆ. ಗಾಜಾದಲ್ಲಿ ನಡೆಯುತ್ತಿರುವ ಯುದ್ಧ, ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಅದಕ್ಕೂ ಮುನ್ನ ಬ್ರಿಟನ್, ಫ್ರಾನ್ಸ್, ಕೆನಡಾ, ಆಸ್ಟ್ರೇಲಿಯಾ, ಪೋರ್ಚುಗಲ್ ಸೇರಿದಂತೆ ಸುಮಾರು 140 ದೇಶಗಳು ಪ್ಯಾಲೆಸ್ಟೀನ್ ಅನ್ನು ಪ್ರತ್ಯೇಕ ದೇಶವನ್ನಾಗಿ ಪರಿಗಣಿಸಲು ಮುಂದಾಗಿವೆ. ಇದನ್ನೂ ಓದಿ: H1B ವೀಸಾಕ್ಕೆ ಮೊದಲು ಎಷ್ಟು ಶುಲ್ಕ ಇತ್ತು? ಟ್ರಂಪ್ ನಿರ್ಧಾರ ಭಾರತಕ್ಕೆ ಲಾಭವೋ? ನಷ್ಟವೋ?
ಇದೊಂದು ಸಾಂಕೇತಿಕ ನಡೆಯಾಗಲಿದೆಯಾದರೂ ಯುದ್ಧ ನಿಲ್ಲಿಸಲು ಇಸ್ರೇಲ್ ಮೇಲೆ ಈ ನಿರ್ಧಾರವು ರಾಜತಾಂತ್ರಿಕ ಒತ್ತಡವನ್ನು ಮತ್ತಷ್ಟು ಹೆಚ್ಚಿಸಬಹುದು. ಇದರಿಂದ ಗಾಜಾದಲ್ಲಿ ಶಾಂತಿ ನೆಲಸಬಹುದು ಎಂದು ಬ್ರಿಟನ್ ಆಶಿಸಿದೆ. ಫ್ರಾನ್ಸ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ನಿರ್ಧಾರವನ್ನು ಇಸ್ರೇಲ್‌ನಲ್ಲಿರುವ ಶಾಂತಿಪರ ಹೋರಾಟಗಾರರು ಸ್ವಾಗತಿಸಿದ್ದಾರೆ. ಇದನ್ನೂ ಓದಿ: H-1B ವೀಸಾ ಶುಲ್ಕ ಹೊಸ ಅರ್ಜಿದಾರರಿಗೆ ಮಾತ್ರ- ಒಂದು ಬಾರಿ ಪಾವತಿಸಬೇಕು: ಅಮೆರಿಕ ಸರ್ಕಾರ
ಈ ಬೆಳವಣಿಗೆ ನಡುವೆಯೇ ಗಾಜಾ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಒಂದೇ ದಿನ 91 ಸಾವು ಸಾವನ್ನಪ್ಪಿದ್ದಾರೆ. ಇದರಿಂದ ಟೆಲ್ ಅವೀವ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಗಾಜಾದ ಅತಿದೊಡ್ಡ ನಗರ ಕೇಂದ್ರವನ್ನು ವಶಪಡಿಸಿಕೊಳ್ಳಲು ವಾಯು ಮತ್ತು ಭೂಸೇನಾ ಕಾರ್ಯಾಚರಣೆ ತೀವ್ರಗೊಳಿಸಲಾಗಿತ್ತು. ಇಸ್ರೇಲಿ ಪಡೆಗಳು ಒಂದೇ ದಿನದಲ್ಲಿ ಗಾಜಾದಲ್ಲಿ 91 ಪ್ಯಾಲೆಸ್ಟೀನಿಯನ್ನರನ್ನು ಹತ್ಯೆ ಮಾಡಿವೆ. ಪ್ರಮುಖ ವೈದ್ಯರ ಕುಟುಂಬ ಸದಸ್ಯರು ಮತ್ತು ಉತ್ತರ ಗಾಜಾ ನಗರದ ಹಲವಾರು ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.