ಲಂಡನ್: ಬ್ರಿಟನ್ ಸಂಸತ್‍ನಲ್ಲಿ ಸೋಮವಾರ ಸಂಜೆ ನಡೆದ ಗೌಪ್ಯ ಮತದಾನದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ವಿಶ್ವಾಸ ಮತ ಗೆಲ್ಲುವ ಮೂಲಕ ತಮ್ಮ ಅಧಿಕಾರವನ್ನು ಉಳಿಸಿಕೊಂಡಿದ್ದಾರೆ.
ಸಂಸತ್‍ನಲ್ಲಿ ನಡೆದ ರಹಸ್ಯ ಮತದಾನದಲ್ಲಿ ಬೋರಿಸ್ ಜಾನ್ಸನ್ ಅವರ ಪರ 211 ಮತಗಳು ಚಲಾವಣೆಯಾದರೆ, ವಿರುದ್ಧ 148 ಮತಗಳನ್ನು ಅವರದ್ದೇ ಪಕ್ಷದ (ಕನ್ಸರ್‌ವೇಟಿವ್) ಸಂಸದರು ಹಾಕಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಂಸೋತ್ ಬಂಧನ
Advertisement
We need to come together as a party and focus on what this government is doing to help people with the cost of living, to clear the COVID backlogs and to make our streets safer.
We will continue to unite, level up and strengthen our economy. pic.twitter.com/vIWK81dDJC
— Boris Johnson (@BorisJohnson) June 6, 2022
Advertisement
ಅವಿಶ್ವಾಸ ಮತದಾನ ಪ್ರಕ್ರಿಯೆಲ್ಲಿ ಬೋರಿಸ್ ಜಾನ್ಸನ್ ಅವರು ಗೆಲುವು ಸಾಧಿಸುವ ಮೂಲಕ ಒಂದು ವರ್ಷದ ಮಟ್ಟಿಗೆ ತಮ್ಮ ಪಟ್ಟವನ್ನು ಭದ್ರಪಡಿಸಿಕೊಂಡಿದ್ದು, ಹೀಗಿದ್ದರೂ ಪ್ರಧಾನಿ ಪಟ್ಟ ಉಳಿಸಲು ಇನ್ನೂ ತೂಗುಗತ್ತಿಯಲ್ಲಿ ನಡೆಯಬೇಕಾಗಬಹುದು, ಯಾವ ಕ್ಷಣದಲ್ಲಿ ಬೇಕಾದರೂ ತಮ್ಮ ವಿರುದ್ಧ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
Advertisement
ಕೋವಿಡ್ ಸಾಂಕ್ರಾಮಿಕ ಲಾಕ್‍ಡೌನ್ ಇದ್ದರೂ ಬೋರಿಸ್ ಜಾನ್ಸನ್ ಮಾತ್ರ ಡೌನಿಂಗ್ ಸ್ಟ್ರೀಟ್‍ನಲ್ಲಿ ಪಾರ್ಟಿ ಮಾಡುವ ಮೂಲಕ ವಿವಾದಕ್ಕೆ ಕಾರಣವಾಗಿದ್ದರು. ಔತಣಕೂಟದಲ್ಲಿ ಮದ್ಯ ಸೇವಿಸುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಚಾರವಾಗಿ ಸ್ವಪಕ್ಷದ ಸದಸ್ಯರೇ ಬೋರಿಸ್ ಜಾನ್ಸನ್ ವಿರುದ್ಧ ವಿರೋಧ ವ್ಯಕ್ತಪಡಿಸಿ ರಾಜೀನಾಮೆಗೆ ಆಗ್ರಹಿಸಿದ್ದರು. ವಿವಾದದ ಕುರಿತು ತಾನು ಎರಡೆರಡು ಬಾರಿ ಕ್ಷಮೆಯಾಚಿಸಿದ್ದರೂ ವಿವಾದ ಕಾವು ಹಾಗೇ ಇತ್ತು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ನಲಪಾಡ್ ರೌಡಿಸಂ ಆರೋಪ – ಡಿಕೆಶಿಗೆ ದೂರು
Advertisement
ಸದ್ಯ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ಏರುತ್ತಿರುವ ಬೋರಿಸ್ ಜಾನ್ಸನ್, ಈ ಫಲಿತಾಂಶವನ್ನು ಗುಡ್ ನ್ಯೂಸ್ ಮತ್ತು ನಿರ್ಣಾಯಕ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಒಗ್ಗಟ್ಟಿನಿಂದ ಮುನ್ನಡೆಯಲು ಫಲಿತಾಂಶ ಅವಕಾಶ ಕಲ್ಪಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.