ಲಂಡನ್: ಹೊರ ದೇಶಗಳಿಂದ ಇಂಗ್ಲೆಂಡ್‌ಗೆ ಬರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸುವ ನಿಯಮವನ್ನು ತೆಗೆದು ಹಾಕಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.
ಸೋಂಕು ಪ್ರಕರಣಗಳ ಸಂಖ್ಯೆ ಇಳಿಯುತ್ತಿದೆ. ಹೀಗಾಗಿ ಬೇರೆ ದೇಶಗಳಿಂದ ಬರುವವರಿಗೆ ಇರುವ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು. ಈ ವಿನಾಯಿತಿ ಸಂಪೂರ್ಣವಾಗಿ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮುಂಬರುವ ವಾರಗಳಲ್ಲಿ ಓಮಿಕ್ರಾನ್ ಅಲೆ ತೀವ್ರಗೊಳ್ಳಬಹುದು ಎಂದ ತಜ್ಞರು!
Advertisement
Advertisement
ಇಂಗ್ಲೆಂಡ್ ವ್ಯಾಪಾರ ಹಾಗೂ ಪ್ರಯಾಣಿಕರಿಗೆ ಮುಕ್ತವಾಗಿದೆ. ಆದ್ದರಿಂದ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಲು ಸರ್ಕಾರ ನಿರ್ಧರಿಸಿದೆ. ಲಸಿಕೆ ಎರಡೂ ಡೋಸ್ ಪಡೆದವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ ಎಂದು ಹೇಳಿದ್ದಾರೆ.
Advertisement
ನಿರ್ಬಂಧ ಸಡಿಲಿಕೆ ದಿನಾಂಕವನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ಆದರೆ ಕೋವಿಡ್ ಲಸಿಕೆಯನ್ನು ಸಂಪೂರ್ಣವಾಗಿ ಪಡೆದವರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕ ನಿರ್ಣಾಯಕ ಹಂತದಲ್ಲಿದೆ: WHO ಮುಖ್ಯಸ್ಥ
Advertisement
ಯೂರೋಪ್‌ನಲ್ಲಿ ಕೋವಿಡ್ ಹೊಡೆತಕ್ಕೆ ಹೆಚ್ಚು ತುತ್ತಾದ ದೇಶ ಇಂಗ್ಲೆಂಡ್. ಇಲ್ಲಿ ಈವರೆಗೆ ಸೋಂಕಿನಿಂದ 1,54,000 ಮಂದಿ ಸಾವಿಗೀಡಾಗಿದ್ದಾರೆ. ಆದರೆ ಈಚೆಗೆ ಇಂಗ್ಲೆಂಡ್‌ನಲ್ಲಿ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಆದ್ದರಿಂದ ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಮುಂದಾಗಿದೆ.
ನಿರ್ಬಂಧ ಸಡಿಲಿಕೆ ಬಗೆಗಿನ ಸರ್ಕಾರದ ನಿಲುವಿಗೆ ವಿರೋಧ ವ್ಯಕ್ತವಾಗಿದೆ. ನಿರ್ಬಂಧಗಳನ್ನು ಸಡಿಲಗೊಳಿಸಿದರೆ ಸೋಂಕು ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣಬಹುದು. ಇದರಿಂದ ಮತ್ತಷ್ಟು ಸಮಸ್ಯೆಯಾಗಬಹುದು ಅಭಿಪ್ರಾಯ ವ್ಯಕ್ತವಾಗಿದೆ.