ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವಂತೆ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಎಂದು ಅಧಿಕೃತ ಮೂಲ ಹೇಳಿದೆ.
ವಾಯುಪಡೆಯ ಸಾಮಥ್ರ್ಯವನ್ನು ಸಹಾಯ ಪಡೆದುಕೊಂಡು ಕಡಿಮೆ ಸಮಯದಲ್ಲಿ ಹೆಚ್ಚಿನ ಜನರನ್ನು ಸ್ಥಳಾಂತರಿಸಬಹುದು. ಇದು ಇದರಿಂದ ಹೆಚ್ಚು ಜನರನ್ನು ಕರೆಸಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದೆ.
ಭಾರತದ ವಾಯುಪಡೆಯು ಸಿ-17 ಗ್ಲೋಬ್‍ಮಾಸ್ಟರ್ ವಿಮಾನವನ್ನು ಆಪರೇಷನ್ ಗಂಗಾದ ಭಾಗವಾಗಿ ಅಳವಡಿಸುವ ನಿರೀಕ್ಷೆಯಿದೆ. ಇಂದು ಬೆಳಗ್ಗೆ 182 ಭಾರತೀಯರನ್ನು ಹೊತ್ತ ವಿಮಾನವೊಂದು ಮುಂಬೈಗೆ ಬಂದಿಳಿದಿದೆ. ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಭಾರತೀಯ ವಿಮಾನವು ರೊಮೇನಿಯನ್ ರಾಜಧಾನಿ ಬುಕಾರೆಸ್ಟ್ ತಲುಪಿದೆ.
ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಉಕ್ರೇನ್‍ನ ನೆರೆಯ ರಾಷ್ಟ್ರಗಳಾದ ರೊಮೇನಿಯಾ ಮತ್ತು ಸ್ಲೋವಾಕ್ ರಿಪಬ್ಲಿಕ್‍ನಲ್ಲಿರುವವರೊಂದಿಗೆ ಮಾತನಾಡಿ ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ದೇಶಕ್ಕೆ ವಾಪಸ್ ಕರೆಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಬಳಸಿ ರಷ್ಯಾದ ಮಿಲಿಟರಿ ಟ್ಯಾಂಕ್ ಹೊತ್ತೊಯ್ದ ರೈತ
ಉಕ್ರೇನ್‍ನಲ್ಲಿದ್ದ ಅಂದಾಜು 20,000 ಭಾರತೀಯರಲ್ಲಿ ಸುಮಾರು 8,000 ಜನರು ಫೆಬ್ರವರಿ ತಿಂಗಳಲ್ಲಿ ದೇಶವನ್ನು ತೊರೆದಿದ್ದಾರೆ ಎಂದು ಸರ್ಕಾರ ಹೇಳಿದೆ. ಇದನ್ನೂ ಓದಿ: ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್