ಮಡಿಕೇರಿ: ಉಕ್ರೇನ್‍ನಲ್ಲಿ ಕರ್ನಾಟಕದ ನೂರಾರು ವಿದ್ಯಾರ್ಥಿಗಳು ಸಿಲುಕಿರುವ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂಜಾಗ್ರತೆ ವಹಿಸಿದೆ. ಅಲ್ಲದೆ ನಮ್ಮ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದಲೂ ಒಬ್ಬರು ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
Advertisement
ಮಡಿಕೇರಿಯಲ್ಲಿ ಅಂತ್ಯೋದಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿ ಸಿಲುಕಿರುವ ನಾಗರಿಕರ ಜೊತೆಗೆ ನಿನ್ನೆಯೇ ರಾಜ್ಯದ 12 ವಿದ್ಯಾರ್ಥಿಗಳನ್ನು ಕರೆತರಲಾಗಿದೆ. ಸಂಪರ್ಕದ ಕೊರತೆ ಮತ್ತು ಏನು ಆಗುವುದಿಲ್ಲ ಎಂಬ ಮನೋಭಾವದಿಂದ ಕೆಲವು ವಿದ್ಯಾರ್ಥಿಗಳು ಅಲ್ಲಿಯೇ ಉಳಿದುಕೊಂಡಿದ್ದಾರೆ. ಅಲ್ಲದೇ ಅಲ್ಲೇ ಉಳಿದುಕೊಂಡಿರುವವರ ಸಮೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ವಂತ ಸಾಮಾಜಿಕ ಮಾಧ್ಯಮ ಆ್ಯಪ್ ಬಿಡುಗಡೆ ಮಾಡಿದ ಟ್ರಂಪ್
Advertisement
ನನ್ನ ಇಲಾಖೆಯಿಂದಲೂ ಒಬ್ಬರು ಅಧಿಕಾರಿಯನ್ನು ಇದಕ್ಕಾಗಿ ನೇಮಿಸಲಾಗಿದೆ. ಅಲ್ಲಿ ಒಂದಷ್ಟು ಜನರಿಗೆ ಆಹಾರದ ಕೊರತೆಯೂ ಎದುರಾಗಿದೆ. ಅದನ್ನು ನಿಭಾಯಿಸುವ ಕೆಲಸ ಆಗುತ್ತಿದೆ. ಈಗಾಗಲೇ ದೂರವಾಣಿ ಮೂಲಕ ವಿದ್ಯಾರ್ಥಿಗಳ ಜೊತೆ ಮಾತಾನಾಡಿ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ ಎಂದರು.
Advertisement
Advertisement
ರಷ್ಯಾ ಹಾಗೂ ಉಕ್ರೇನ್ ಗಡಿಯ 40 ಕೀಲೋ ಮೀಟರ್‍ಗಳಲ್ಲಿ ಇರುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕೇಂದ್ರ ರಾಯಭಾರಿ ಅವರೊಂದಿಗೆ ಸರ್ಕಾರ ಮಾಹಿತಿ ನೀಡುತ್ತಿದೆ. ಒಟ್ಟಿನಲ್ಲಿ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಕರೆತರುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನ ಸಮುದ್ರ, ಭೂ-ಆಧಾರಿತ ಪ್ರದೇಶದ ಮೇಲೆ ರಷ್ಯಾ ದಾಳಿ!