ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವೆ ಗುರುವಾರ ಬೆಳಗ್ಗೆಯಿಂದ ಯುದ್ಧ ಪ್ರಾರಂಭವಾಗಿದೆ. ಸದ್ಯ ಉಕ್ರೇನ್‍ನಲ್ಲಿ ನೆಲೆಸಿರುವ ಅನೇಕ ಭಾರತೀಯರು ಹಾಗೂ ಕನ್ನಡಿಗರಿಗೆ ಆತಂಕ ಹೆಚ್ಚಾಗಿದೆ. ಈ ನಡುವೆ ಹಾವೇರಿ ಜಿಲ್ಲೆಯ ಒಂಬತ್ತು ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದಾರೆ.
ಹೌದು, ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಉಕ್ರೇನ್‍ನಲ್ಲಿ ಪಡೆಯುತ್ತಿದ್ದಾರೆ. ರಾಣೇಬೆನ್ನೂರು ತಾಲೂಕಿನ 8 ವಿದ್ಯಾರ್ಥಿಗಳು ಬ್ಯಾಡಗಿ ತಾಲೂಕಿನ ಓರ್ವ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ವಾಸಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮಿತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ್ ಅಜರೆಡ್ಡಿ ಹಾಗೂ ಮೈನಾ ಎಂದು ಗುರುತಿಸಲಾಗಿದೆ ಮತ್ತು ಎಲ್ಲರೂ ಕಾಕ್ರ್ಯೂ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್‌ಗೆ ಆರ್ಥಿಕ ನೆರವು ನೀಡಲು ಸಿದ್ಧ: ವಿಶ್ವ ಬ್ಯಾಂಕ್
Advertisement
Advertisement
ಇದೀಗ ಮಕ್ಕಳ ಜೊತೆ ವೀಡಿಯೋ ಕಾಲ್ ಮಾಡಿ ಪೋಷಕರು ಅಲ್ಲಿ ಪರಿಸ್ಥಿತಿ ಬಗ್ಗೆ ವಿಚಾರಿಸುತ್ತಿದ್ದಾರೆ. ಸರಿಯಾದ ಪ್ರಮಾಣದಲ್ಲಿ ನೀರು ಹಾಗೂ ಆಹಾರ ಸಿಗುತ್ತಿಲ್ಲ. ಎಲ್ಲ ಅಂಗಡಿ ಮಾಲ್ ತುಂಬಾ ಗದ್ದಲದಲ್ಲಿ ಕೂಡಿವೆ. ಯಾವಾಗ ಏನು ಆಗುತ್ತದೆಯೋ ಎಂಬ ಆತಂಕ ಕನ್ನಡಿಗರಲ್ಲಿ ಮೂಡಿದೆ. ಇದನ್ನೂ ಓದಿ: Russia Ukraine War – ಯಾವ ರಾಷ್ಟ್ರದ ಬೆಂಬಲ ಯಾರಿಗೆ?
Advertisement
Advertisement
ಪೋಷಕರು ನಮ್ಮ ಮಕ್ಕಳನ್ನು ಸರ್ಕಾರ ಸುರಕ್ಷಿತೆಯಿಂದ ಕರುನಾಡಿಗೆ ಕರೆತರುವ ಕೆಲಸ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ರಾಣೇಬೆನ್ನೂರು ಶಾಸಕ ಅರುಣ್‍ಕುಮಾರ್ ಪೂಜಾರ್ ಅವರು ಭೇಟಿ ನೀಡಿ ಪೋಷಕರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆಗೆ ಮಾತನಾಡಿದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತರುವಂತೆ ಮನವಿ ಮಾಡಿದ್ದಾರೆ.