ನವದೆಹಲಿ: ಉಕ್ರೇನ್‍ನ ಮೇಲೆ ರಷ್ಯಾ ದಾಳಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‍ಸ್ಕಿ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಹಾಯವನ್ನು ಕೋರಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಉಕ್ರೇನ್ ವಿರುದ್ಧ ರಷ್ಯಾದ ಆಕ್ರಮಣವನ್ನು ಖಂಡಿಸುವ ನಿರ್ಣಯದಿಂದ ದೂರವುಳಿದ ನಿರ್ಧಾರವನ್ನು ರಷ್ಯಾ ಶ್ಲಾಘಿಸಿತ್ತು. ಇದಾದ ಬಳಿಕ ಉಕ್ರೇನ್ ಅಧ್ಯಕ್ಷ ಅವರು ಪ್ರಧಾನಿ ಅವರೊಂದಿಗೆ ಮಾತನಾಡಿ ರಾಜಕೀಯ ಬೆಂಬಲ ಕೋರಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
Highly appreciate India’s independent and balanced position at the voting in the UNSC on February 25, 2022.
In the spirit of the special and privileged strategic partnership Russia is committed to maintain close dialogue with India on the situation around Ukraine https://t.co/oKtElMLLRf
— Russia in India ???????? (@RusEmbIndia) February 26, 2022
Advertisement
1 ಲಕ್ಷಕ್ಕೂ ಹೆಚ್ಚು ಸೈನಿಕರಿಂದ ರಷ್ಯಾ ದಾಳಿ ಮಾಡುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಿಸಿದ್ದೇನೆ. ಜೊತೆಗೆ ಶಾಂತಿಯುತ ಪ್ರಯತ್ನಗಳಿಗೆ ಭಾರತ ಸರ್ಕಾರ ಸಹಕರಿಸಲು ಸಿದ್ಧ ಎಂದು ತಿಳಿಸಿದೆ ಎಂದು ಉಕ್ರೇನ್ ಅಧ್ಯಕ್ಷ ಟ್ವೀಟ್ ಮಾಡಿದ್ದಾರೆ.
Advertisement
ಈ ಬಗ್ಗೆ ಪ್ರಧಾನಿ ಕಚೇರಿ ಪ್ರಕಟನೆ ಹೊರಡಿಸಿದ್ದು, ಉಕ್ರೇನ್ ರಷ್ಯಾ ನಡುವಿನ ಯುದ್ಧದಲ್ಲಿ ಉಂಟಾದ ಸಾವು, ನೋವು ಆಸ್ತಿ-ಪಾಸ್ತಿ ಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿ, ಅವರನ್ನು ತವರಿಗೆ ಕರೆತರಲು ಉಕ್ರೇನ್ ಅಧಿಕಾರಿಗಳ ಸಹಾಯವನ್ನು ಕೋರಿದರು ಎಂದು ತಿಳಿಸಿದೆ.
Advertisement
ಉಕ್ರೇನ್ ವಿರುದ್ಧದ ರಷ್ಯಾ ಆಕ್ರಮಣವನ್ನು ಖಂಡಿಸುವ ಯುಎನ್‍ಎಸ್‍ಸಿ ನಿರ್ಣಯದಿಂದ ಭಾರತ ದೂರ ಉಳಿದಿದೆ. ರಷ್ಯಾ ವಿರುದ್ಧ 11 ರಾಷ್ಟ್ರಗಳು ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದರೆ, ಭಾರತ ಸೇರಿ ಮೂರು ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದು ತಟಸ್ಥ ನೀತಿ ಅನುಸರಿಸಿವೆ. ಇದನ್ನೂ ಓದಿ: ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು
Highly appreciate India’s independent and balanced position at the voting in the UNSC on February 25, 2022.
In the spirit of the special and privileged strategic partnership Russia is committed to maintain close dialogue with India on the situation around Ukraine https://t.co/oKtElMLLRf
— Russia in India ???????? (@RusEmbIndia) February 26, 2022
ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಿರ್ಣಯ ಮಂಡಿಸಲಾಗಿತ್ತು. ಭಾರತ, ಚೀನಾ, ಯುಎಇ ಈ ಮೂರು ರಾಷ್ಟ್ರಗಳು ಯುಎನ್‍ಎಸ್‍ಸಿ ನಿರ್ಣಯದಿಂದ ದೂರ ಉಳಿದಿವೆ. ಆದರೆ 11 ರಾಷ್ಟ್ರಗಳು ರಷ್ಯಾ ವಿರುದ್ಧ ಮತ ಚಲಾಯಿಸಿವೆ. ಈ ವೇಳೆ ರಷ್ಯಾ ತನ್ನ ವಿಟೋ ಅಧಿಕಾರವನ್ನು ಬಳಸಿದೆ. ಇದನ್ನೂ ಓದಿ: ಶೀಘ್ರವೇ ಉಕ್ರೇನ್‍ಗೆ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳನ್ನು ಕಳುಹಿಸಲಿರುವ ಜರ್ಮನಿ
ಯುಎನ್‍ಎಸ್‍ಸಿ ನಿರ್ಣಯದಿಂದ ದೂರ ಉಳಿದ ಭಾರತ ಸೇರಿ ಮೂರು ರಾಷ್ಟ್ರಗಳಿಗೆ ರಷ್ಯಾ ಧನ್ಯವಾದ ತಿಳಿಸಿದೆ. ರಷ್ಯಾ ವಿರುದ್ಧದ ಮತದಾನದಿಂದ ಭಾರತ, ಚೀನಾ, ಯುಎಇ ದೂರ ಉಳಿದಿದ್ದು, ತಟಸ್ಥವಾಗಿವೆ. ಹೀಗಾಗಿ ರಷ್ಯಾ ಕೃತಜ್ಞತೆ ಸಲ್ಲಿಸಿದೆ.