ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

Public TV
2 Min Read
NAVEEN

ಕೀವ್: ಪುಟ್ಟ ರಾಷ್ಟ್ರ ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಕನ್ನಡಿಗ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು, ಇದೀಗ ಅವರ ಮೃತದೇಹ ಪತ್ತೆಯಾಗಿದೆ.

ನವೀನ್ ಮೃತದೇಹದ ಫೋಟೋವನ್ನು ಅವರ ಸ್ನೇಹಿತರಿಗೆ ಕಳುಹಿಸಲಾಗಿದೆ. ಈ ಫೋಟೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

NAVEEN 1

ಸದ್ಯ ಖಾರ್ಕಿವ್ ನಲ್ಲಿ ನವೀನ್ ಮೃತದೇಹ ಇದ್ದು, ಇಂದು ಭಾರತಕ್ಕೆ ಸಾಗಿಸಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಉಕ್ರೇನ್ ರಾಯಭಾರಿ ಕಚೇರಿ ಮೂಲಕ ನವೀನ್ ಪಾರ್ಥಿವ ಶರೀರ ವಾಪಸ್ ತರಲು ಯತ್ನ ಮಾಡಲಾಗುತ್ತಿದೆ. ಅಧಿಕಾರಿಗಳ ಹಂತದಲ್ಲಿ ಮಾತುಕತೆ ಈಗಾಗಲೇ ನಡೆದಿದ್ದು, ಖಾರ್ಕಿವ್ ನಿಂದ ಇಂದು ಗಡಿಗೆ ರಸ್ತೆ ಮಾರ್ಗವಾಗಿ ಮೃತ ದೇಹ ಸಾಗಿಸುವ ಸಾಧ್ಯತೆ ಇದೆ.‌ ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ರವಾನಿಸಲು ಚಿಂತನೆ ನಡೆಸಲಾಗಿದ್ದು, ದೆಹಲಿ ಮೂಲಕ ರಾಜ್ಯ ಸರ್ಕಾರಕ್ಕೆ ಒಪ್ಪಿಸಲು ಯೋಜನೆ ರೂಪಿಸಲಾಗಿದೆ.

Russia Ukraine War

ರಷ್ಯಾ-ಉಕ್ರೇನ್ ನಡುವಿನ ಯುದ್ಧದ ತೀವ್ರಗೊಳ್ಳುತ್ತಿದೆ. ಆದಷ್ಟು ಬೇಗ ಉಕ್ರೇನ್ ತೊರೆಯಿರಿ ಎಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟ ಬೆನ್ನಲ್ಲೇ ರಷ್ಯಾ ಶೆಲ್ ದಾಳಿಗೆ ಕನ್ನಡಿಗ ನವೀನ್ (22) ಬಲಿಯಾಗಿದ್ದಾರೆ. ಖಾರ್ಕೀವ್‍ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿಯ ನವೀನ್ ದುರಂತ ಸಾವನ್ನಪ್ಪಿದ್ದಾರೆ. ಖಾರ್ಕೀವ್‍ನಲ್ಲಿ ಇವತ್ತು ಬೆಳಗ್ಗೆ 7 ಗಂಟೆಗೆ ಸೂಪರ್ ಮಾರ್ಕೆಟ್‍ಗೆ ಹೋಗಿ ಸಾಲಿನಲ್ಲಿ ನಿಂತಿದ್ದಾಗ ನವೀನ್ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ

Ukraine Russia naveen

ಈ ಬಗ್ಗೆ, ಖಾರ್ಕೀವ್‍ನಲ್ಲಿರುವ ನವೀನ್ ಸ್ನೇಹಿತ ಶ್ರೀಕಾಂತ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬೆಳಗ್ಗೆ 7.30ಕ್ಕೆ ರೈಲ್ವೇ ನಿಲ್ದಾಣಕ್ಕೆ ಹೋಗಬೇಕಿತ್ತು. ರೈಲಿನ ಮೂಲಕ ಪೋಲೆಂಡ್ ಗಡಿ ತಲುಪಬೇಕಿತ್ತು. ನವೀನ್ ಸೇರಿ 8 ಜನರ ನಮ್ಮ ತಂಡ ರೈಲ್ವೇ ನಿಲ್ದಾಣಕ್ಕೆ ಹೊರಡಬೇಕಿತ್ತು. ಈ ವೇಳೆ ಎಲ್ಲರಿಗೂ ಊಟ ತರಲು ಬಂಕರ್‍ನಿಂದ ನವೀನ್ ಹೊರ ಹೋಗಿದ್ದ. ಸೂಪರ್ ಮಾರ್ಕೆಟ್ ಬಳಿ ತುಂಬಾ ಕ್ಯೂ ಇದೆ. ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ ಕೊನೆ ಮಾತಾಗಿತ್ತು. ನಮಗೆಂದು ಊಟ ತರಲು ಹೋದವರ ಬರಲೇ ಇಲ್ಲ ಅಂತ ಭಾವುಕರಾದರು.

Share This Article