ಕೀವ್: ರಷ್ಯಾ ಎರಡನೇ ಬಾರಿಗೆ ಉಕ್ರೇನ್‍ನಲ್ಲಿ ತಾತ್ಕಾಲಿಕವಾಗಿ ಕದನ ವಿರಾಮ ಘೋಷಿಸಿದ್ದು, ಕೀವ್, ಖಾರ್ಕಿವ್, ಸುಮಿ, ಮರಿಯುಪೋಲ್‍ನ ಜನರಿಗೆ ನಗರವನ್ನು ಬಿಟ್ಟು ತೆರಳಲು ಸೂಚಿಸಿದೆ.
ರಷ್ಯಾ ಉಕ್ರೇನ್‍ನ ಮೇಲೆ ನಡೆಸುತ್ತಿರುವ ದಾಳಿ 12ನೇ ದಿನಕ್ಕೆ ಕಾಲಿಟ್ಟಿದ್ದು, ಎರಡನೇ ಬಾರಿಗೆ 4 ನಗರಗಳಲ್ಲಿ ಕದನ ವಿರಾಮ ಘೋಷಣೆ ಮಾಡಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12:30ನಂತರ ತಾತ್ಕಾಲಿಕವಾಗಿ ಕದನ ವಿರಾಮ ಘೋಷಣೆ ಮಾಡಿದೆ.
Advertisement
Advertisement
ಫ್ರಾನ್ಸ್ ಅಧ್ಯಕ್ಷರ ಸೂಚನೆ ಮೇರೆಗೆ ಕದನ ವಿರಾಮ ಘೋಷಿಸಲಾಗಿದೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಕದನ ವಿರಾಮಕ್ಕೆ ವೈಯಕ್ತಿಕವಾಗಿ ಕೋರಿಕೆಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 4 ನಗರಗಳಲ್ಲಿ ಕದನ ವಿರಾಮವನ್ನು ಘೋಷಿಸಿ, ನಾಗರಿಕರನ್ನು ತೆರಳುವಂತೆ ಸೂಚಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ. ಕನದ ವಿರಾಮದ ನಂತರದಲ್ಲಿ ಉಕ್ರೇನ್‍ನ ಈ 4 ನಗರಗಳಲ್ಲಿ ರಷ್ಯಾ ಭಾರೀ ದಾಳಿ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು
Advertisement
Advertisement
ಈಗಾಗಲೇ ಉಕ್ರೇನ್‍ನ ಅಣು ವಿದ್ಯುತ್ ಸ್ಥಾವರಗಳ ಮೇಲೆ ರಷ್ಯಾ ದಾಳಿ ಮಾಡಿದ್ದು, ಅಣು ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯಿಂದ ದೊಡ್ಡ ಪ್ರಮಾದ ಉಂಟಾಗಿದೆ. ಚೆರ್ನೋಬಿಲ್, ಝಫೋರಿಝೀಯಾ ಎರಡು ಸ್ಥಾವರಗಳನ್ನು ರಷ್ಯಾ ಕೈವಶ ಮಾಡಿಕೊಂಡಿದೆ. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧ – 14 ವರ್ಷದ ಬಳಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ