ಕೀವ್: ಭೀಕರ ಯುದ್ಧದ ಹಿನ್ನೆಲೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್‌ಗೆ ಜೆರುಸಲೇಮ್‌ನಲ್ಲಿ ಸಂಧಾನಕ್ಕೆ ಬರುವಂತೆ ಕರೆ ನೀಡಿದ್ದಾರೆ.
ಉಕ್ರೇನ್-ರಷ್ಯಾ ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಮಾತುಕತೆ ನಡೆಸಿ ಪರಿಹರಿಸಲು ಝೆಲೆನ್ಸ್ಕಿ, ಪುಟಿನ್‌ಗೆ ಆಫರ್ ನೀಡಿದ್ದು, ಇದರಲ್ಲಿ ಮಧ್ಯವರ್ತಿಯಾಗಿ ಮಾತುಕತೆ ಮುನ್ನಡೆಸಲು ಝೆಲೆನ್ಸ್ಕಿ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಮನವಿಯಿಟ್ಟಿದ್ದಾರೆ. ಇದನ್ನೂ ಓದಿ: ಉಕ್ರೇನ್‍ಗೆ 200 ಮಿಲಿಯನ್ ಡಾಲರ್ ಆರ್ಥಿಕ ನೆರವು ನೀಡಿದ ಅಮೆರಿಕ
Advertisement
Advertisement
ವರದಿಗಳ ಪ್ರಕಾರ ಝೆಲೆನ್ಸ್ಕಿ ಸಂಘರ್ಷವನ್ನು ಪರಿಹರಿಸಲು ರಷ್ಯಾ ಅಥವಾ ಉಕ್ರೇನ್‌ನಲ್ಲಿ ಮಾತುಕತೆ ನಡೆಸುವುದು ಸೂಕ್ತವಲ್ಲ. ಹೀಗಾಗಿ ನಾನು ಇಸ್ರೇಲ್‌ನ ಜೆರುಸಲೇಮ್ ಅನ್ನು ಆಯ್ದುಕೊಂಡಿದ್ದೇನೆ. ಎರಡು ಶತ್ರು ರಾಷ್ಟ್ರಗಳ ಮಾತುಕತೆಗೆ ಮಧ್ಯವರ್ತಿಯಾಗಲು ಬೆನೆಟ್‌ಗೆ ತಿಳಿಸಿದ್ದೇನೆ ಎಂದಿದ್ದಾರೆ.
Advertisement
ನಿನ್ನೆ ಇಸ್ರೇಲ್ ಪ್ರಧಾನಿ ಎರಡು ರಾಷ್ಟ್ರಗಳ ಮಧ್ಯವರ್ತಿಯಾಗಿ ಭಾಗವಹಿಸಿದ್ದು, ಈ ಹಿಂದೆಯೂ ಪುಟಿನ್ ಹಾಗೂ ಝೆಲೆನ್ಸ್ಕಿಯೊಂದಿಗೆ ಪ್ರತ್ಯೇಕವಾಗಿ ಹಲವು ಬಾರಿ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನನ್ನು ವಶಪಡಿಸಿಕೊಳ್ಳುವಷ್ಟು ಶಕ್ತಿ ರಷ್ಯಾಕ್ಕಿಲ್ಲ: ಝೆಲೆನ್ಸ್ಕಿ
Advertisement
ಉಕ್ರೇನ್-ರಷ್ಯಾ ನಡುವೆ ಯುದ್ಧ ಪ್ರಾರಂಭವಾದಾಗಿನಿಂದ ಉಕ್ರೇನ್‌ನ 1,300ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದು, ರಷ್ಯಾದ ಸೈನಿಕರ ಸಾವಿನ ಸಂಖ್ಯೆ ಇದಕ್ಕಿಂತಲೂ ಹೆಚ್ಚಿದೆ ಎಂದು ಉಕ್ರೇನ್ ತಿಳಿಸಿದೆ. ರಷ್ಯಾ ಉಕ್ರೇನ್‌ನ ಅತೀ ಹೆಚ್ಚು ಜನಸಂಖ್ಯೆಯಿರುವ ನಗರ ಮೆಲಿಟೊಪೊಲ್ ಅನ್ನು ಶನಿವಾರ ವಶಪಡಿಸಿಕೊಂಡಿದೆ. ರಷ್ಯಾ ಉಕ್ರೇನ್‌ನ ನಾಗರಿಕರ ಮೇಲೂ ದಾಳಿ ನಡೆಸುತ್ತಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರೂ ಸಾವನ್ನಪ್ಪುತ್ತಿದ್ದಾರೆ ಎಂದು ಉಕ್ರೇನ್ ಆರೋಪಿಸಿದೆ.