ಮಾಸ್ಕೋ: ಉಕ್ರೇನ್‌ನ (Ukraine) ನಾಲ್ಕು ಪ್ರದೇಶಗಳನ್ನು ರಷ್ಯಾ (Russia) ವಶಕ್ಕೆ ಪಡೆದಿದೆ. ಈ ಪ್ರದೇಶಗಳು ಶಾಶ್ವತವಾಗಿ ರಷ್ಯಾ ಪಾಲಾಗಲಿವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಘೋಷಿಸಿದ್ದಾರೆ.
ಕ್ರೆಮ್ಲಿನ್ ಸಭಾಂಗಣದಲ್ಲಿ ಈ ಕುರಿತು ಮಾತನಾಡಿದ ಅವರು, ಉಕ್ರೇನ್‌ನ ಸುಮಾರು ಶೇ.15 ರಷ್ಟು ಭೂಭಾಗವಿರುವ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇದು 2ನೇ ವಿಶ್ವ ಯುದ್ಧದ ನಂತರ ಯೂರೋಪ್‌ನಲ್ಲಿಯೇ ಅತಿ ದೊಡ್ಡ ಸ್ವಾಧೀನವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಬೂಲ್ ಶಿಕ್ಷಣ ಕೇಂದ್ರದಲ್ಲಿ ಬಾಂಬ್ ಸ್ಫೋಟ – 19 ಮಂದಿ ದುರ್ಮರಣ
Advertisement
Advertisement
ಉಕ್ರೇನ್‌ನ ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಝಪೊರಿಝಿಯಾ ಪ್ರದೇಶಗಳನ್ನು ರಷ್ಯಾ ವಶಕ್ಕೆ ಪಡೆದಿದೆ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy), ಪುಟಿನ್ ಜೀವನಕ್ಕಿಂತ ಹೆಚ್ಚು ಯುದ್ಧವನ್ನೇ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.
Advertisement
ಯುಎನ್ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್, ಇದು ಅತ್ಯಂತ ಅಪಾಯಕಾರಿ. ವಿಶ್ವಸಂಸ್ಥೆಯ ನಿಯಮ ಉಲ್ಲಂಘನೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಜಬ್ ವಿರುದ್ಧ ಪ್ರತಿಭಟನೆ – ವೇದಿಕೆಯಲ್ಲೇ ಕೂದಲು ಕತ್ತರಿಸಿದ ಟರ್ಕಿ ಗಾಯಕಿ
Advertisement
ಝಪೊರಿಝಿಯಾದಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಇನ್ನೂ 50 ಮಂದಿ ಗಾಯಗೊಂಡಿದ್ದಾರೆ.